September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

ಮುಂಡಾಜೆ : ಮುಂಡಾಜೆ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಬಾಗಿಲು ಇಲ್ಲಿ ಸೆ.22 ರಂದು ಆರೋಗ್ಯ ಕ್ಲಿನಿಕ್ ನಾವೂರು ಇಲ್ಲಿನ ವೈದ್ಯ ಡಾl ಪ್ರದೀಪ್ ಎ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು” ಎನ್ ಎಸ್ ಎಸ್ ಶಿಬಿರವು ವಿದ್ಯಾರ್ಥಿಗಳ ಜೀವನದಲ್ಲಿ ಒಂದು ಮರೆಯಲಾರದ ಸವಿನೆನಪು, ಜೀವನ ಕೌಶಲ್ಯವನ್ನು ಮೈಗೂಡಿಸಿಕೊಳ್ಳುವುದರ ಮೂಲಕ ಇದನ್ನು ಸಾರ್ಥಕಪಡಿಸಿಕೊಳ್ಳಿ” ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ಇವರು ವಹಿಸಿದ್ದರು. ಗ್ರಾಮ ಪಂಚಾಯತ್ ಮಿತ್ತಬಾಗಿಲು ಇದರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಕೆ , ಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಕುಮಾರಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್ ಕೆ, ಶುಭ ಹಾರೈಸಿದರು. ಮಿತ್ತಬಾಗಿಲು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಕೊಲ್ಲಿ, ಕಾಲೇಜಿನ ಪ್ರಾಂಶುಪಾಲೆ ಗೀತಾ, ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷ ಹೈದರಾಲಿ , ಕಾರ್ಯದರ್ಶಿ ಅಬ್ದುಲ್ ಅಜೀಜ್, ಎಸ್ ಡಿ ಎಂ ಸಿ ಅಧ್ಯಕ್ಷ ಕಬೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿಕೆ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಆ. 5: ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya
error: Content is protected !!