ಬೆಳ್ತಂಗಡಿ : ಹಲವಾರು ಪ್ರಕರಣ ಸಂಬಂಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವಷ೯ಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ಸೆ.18ರಂದು ಆದೇಶಿಸಲಾಗಿದೆ.
ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದೆ ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿದೆ. ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಪೊಲೀಸರು ಅಥವಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದಾಗ ಜಿಲ್ಲೆಯನ್ನು ಪ್ರವೇಶಿಸಲು ಅವಕಾಶ ನೀಡಲಾಗಿದೆ.ಪೊಲೀಸರ ಪರವಾಗಿ ಡಿಎಸ್ಪಿ ಬಂಟ್ವಾಳ ಮತ್ತು ತಿಮರೋಡಿ ಪರವಾಗಿ ವಕೀಲರು ಪ್ರಕರಣವನ್ನು ಮಂಡಿಸಿದರು. ಸರ್ಕಾರ ಅಥವಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವಿರುತ್ತದೆ.











