ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು, ಇಂಟರ್ ನ್ಯಾಷನಲ್ ಲಯನ್ಸ್ ಕ್ಲಬ್ ಪುತ್ತೂರು ಕ್ರೌನ್ ಹಾಗೂ ಎ.ಜೆ.ಆಸ್ಪತ್ರೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸೆ. 22 ರಂದು ಆಯೋಜಿಸಲಾಗಿತ್ತು.


ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಸಿಯೋನ್ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿಕೊಂಡು, “ಇಂತಹ ಆರೋಗ್ಯ ಶಿಬಿರಗಳು ಗ್ರಾಮೀಣ ಪ್ರದೇಶದಲ್ಲಿರುವ ನಮ್ಮಆಶ್ರಮನಿವಾಸಿಗಳಿಗೆ ತುಂಬಾ ಉಪಯುಕ್ತವಾಗುತ್ತವೆ.” ಎಂದು ಶುಭ ಹಾರೈಸಿದರು. ಲಯನ್ಸ್ ಕ್ಲಬ್ ಪುತ್ತೂರು ಕ್ರೌನ್ ಇದರ ಅಧ್ಯಕ್ಷ ಆಂಟನಿ ಒಲಿವೆರಾರವರು “ಸೇವೆಯೇ ನಮ್ಮ ಧ್ಯೇಯ. ಇಂತಹ ಶಿಬಿರಗಳು ಜನರ ಜೀವನಕ್ಕೆ ಆಶಾಕಿರಣ ತರುತ್ತವೆ. ಆರೋಗ್ಯ ಶಿಬಿರ ಯಶಸ್ವಿಯಾಗಿ ನಡೆಯಲಿ ಎಲ್ಲರೂ ಆರೋಗ್ಯವಾಗಿರಲಿ” ಎಂದು ಹೇಳಿದರು.

ಎ.ಜೆ.ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಮಂಗಳೂರು ಇಲ್ಲಿನ ವೈದ್ಯಕೀಯ ಅಧಿಕಾರಿ ಡಾ.ಮೆಘನ್ ಹಾಗೂ ಎ.ಜೆ.ಅಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 294ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಲಯನ್ಸ್ ಕ್ಲಬ್ ಮಾರ್ಗದರ್ಶಕರಾದ ಲ್ಯಾನ್ಸಿ ಮಸ್ಕರೇನಸ್, ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಆಶಾ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!