37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಬಾರ್ಯ : ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ 2024-2025 ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.23 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಸೂದ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯನ್ನು ಉದ್ದೇಶಿಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿಕೆ ಉಸ್ಮಾನ್ ರವರು ಹಿತನುಡಿಗಳನ್ನಡಿದರು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಸಂಜೀವಿನಿ ಯೋಜನೆಯ ದ್ಯೆಯೋದ್ದೇಶ ಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸದಸ್ಯರಿಗೆ ಮನಮುಟ್ಟುವಂತೆ ನೀಡಿದರು. ನಿಶಾ ರವರು ವಾರ್ಷಿಕ ವರದಿಯನ್ನು ಹಾಗೂ ಶಾಸನಬದ್ಧ ಲೆಕ್ಕಪರಿಶೋಧನವರದಿಯನ್ನು ಮಂಡಿಸಿದರು.

ಬಾರ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ-ಸ್ವಚ್ಛತೆಯೇ ಸೇವೆ ಪಾಕ್ಷಿಕ 2025 ರ ಅಭಿಯಾನದಡಿ ಕನಸು ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು . ಕಾರ್ಯಕ್ರಮವನ್ನು ಉದ್ದೇಶಿಸಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಸೂದ ರವರು ಸಂಜೀವಿನಿ ಯೋಜನೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು.

ಸಭೆಯಲ್ಲಿ ಸ್ವಸ್ತಿಕ್ ಇವರು ಮಾದಕ ಮುಕ್ತ ಕರ್ನಾಟಕ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ಒಕ್ಕೂಟದ ಸಿಬ್ಬಂದಿ ಗಳು ಪ್ರಾರ್ಥಿಸಿ, ಶರ್ಮಿಳಾ ಸ್ವಾಗತಿಸಿ, ನಿಶಾ ಕಾರ್ಯಕ್ರಮವನ್ನು ನಿರೂಪಿಸಿ , ಪಶು ಸಖಿ ಲಲಿತಾ ಬಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya
error: Content is protected !!