37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್(ರಿ) ಬೆಳ್ತಂಗಡಿ,ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ,ಕೆ ಎಂ ಸಿ ಬ್ಲಡ್ ಸೆಂಟರ್ ಅತ್ತಾವರ ಮಂಗಳೂರು ರೋಟರಿ ಕ್ಲಬ್ ಬೆಳ್ತಂಗಡಿ, ಯುನೈಟ್ ಫಾರ್ ಗುಡ್ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೆಡ್‌ ರಿಬ್ಬನ್ ಕ್ಲಬ್ ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜು ಬೆಳ್ತಂಗಡಿ ಇವುಗಳ ಸಹಯೋಗದೊಂದಿಗೆ ನಡೆದ ಬೃಹತ್‌ ರಕ್ತದಾನ ಶಿಬಿರ ಸೆ. 23 ರಂದು ನಡೆಯಿತು.

ಬೆಳ್ತಂಗಡಿ ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತಾ ಧರ್ಮವಿಜೇತ್ ಅವರು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಯುವ ಸಮಾಜ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬೇಕು ಎಂದರು.

ಕೆಎಂಸಿ ಅತ್ತಾವರ ವೈದ್ಯಾಧಿಕಾರಿ ಡಾ.ಐಶ್ವರ್ಯ ಸತ್ಯನಾಥನ್,ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೋ.ಪ್ರಕಾಶ್ ಪ್ರಭು,ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಸವಿತಾ, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಉಪಸ್ಥಿತರಿದ್ದರು.

ಶ್ರೀ ಗುರುದೇವ ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಎ ಶಮಿವುಲ್ಲಾ ಸ್ವಾಗತಿಸಿ, ಉಪನ್ಯಾಸಕಕಿ ಸೌಮ್ಯಶ್ರೀ ನಿರೂಪಿಸಿ, ಉಪನ್ಯಾಸಕ ಸತೀಶ್ ವಂದಿಸಿದರು.

Related posts

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya
error: Content is protected !!