24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

ಉಜಿರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯದಂತೆ ಸ್ವಚ್ಛ, ಸುಂದರ ಮತ್ತು ಆರೋಗ್ಯ ಭಾರತದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸ್ವಚ್ಛತಾ ಹೀ ಸೇವಾ 2025ರ ಅಂಗವಾಗಿ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತಾಜೆ ಅಮೃತ ಸರೋವರದಲ್ಲಿ ಸೆ.23ರಂದು ಸ್ವಚ್ಚೋತ್ಸವ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ನರ್ವಡೆ ವಿನಾಯಕ ಕರ್ಬಾರಿ, ಐಎಎಸ್ ಅವರು ಭಾಗವಹಿಸಿ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) , ಉಜಿರೆ ಇದರ ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯಸ್ಥರು ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳು ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಬೆಳ್ತಂಗಡಿ ತಾಲೂಕಿನಾದ್ಯಂತ ಸೇವಾ ಸಂಭ್ರಮ ಒಂದು ವಾರದ ವಿಶೇಷ ಸೇವಾ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಭಿತ್ತಿಪತ್ರವನ್ನು ಅನಾವರಣಗೊಳಿಸಿ ಅಧಿಕೃತ ಚಾಲನೆಯನ್ನು ನೀಡಿದರು.ಈ ಅಭಿಯಾನದ ಅಧ್ಯಕ್ಷತೆಯನ್ನು ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಕಾರಂತ್ ಅವರು ವಹಿಸಿದರು.

ಈ ಅಭಿಯಾನದಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಗ್ರಾ.ಕು.ನೀ. ನೈ. ಸಹಾಯಕ ಕಾರ್ಯಪಾಲಕ ಅಭಿಯಂತರರು ವಿಜಯಶಂಕರ್, ಪ್ರೇರಣಾ ಸಂಜೀವಿನಿ ಒಕ್ಕೂಟದ ಸದಸ್ಯರು, ಉಜಿರೆ ವರ್ತಕರ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಪಾಲ್ಗೊಂಡರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಅವರು ಹಾಜರಿದ್ದವರನ್ನು ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನು ಮಾತನಾಡಿದರು. ಬಳಿಕ ಸ್ವಚ್ಛತೆಯೇ ಸೇವೆ- 2025ರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಅತ್ತಾಜೆ ಅಮೃತ ಸರೋವರದ ಸುತ್ತ ಮುತ್ತ ಸಂಪೂರ್ಣ ಸ್ವಚ್ಛ ಗೊಳಿಸಿ, ಅತ್ತಾಜೆ ಸರೋವರವನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲಾಯಿತು. ಗ್ರಾಮ ಪಂಚಾಯತಿ ಉಪಾಧ್ಯಕ್ಷರು ರವಿ ಕುಮಾರ್ ವಂದಿಸಿದರು. ಉಜಿರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಸ್ವಚ್ಛತಾ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ವಿದ್ಯಾರ್ಥಿಗಳಿಗೆ ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ನವೀನತೆ ಮತ್ತು ತಾಂತ್ರಿಕ ಕೌಶಲ್ಯ ತರಬೇತಿ

Suddi Udaya
error: Content is protected !!