September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

ಬೆಳ್ತಂಗಡಿ : ಹಲವಾರು ಪ್ರಕರಣ ಸಂಬಂಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವಷ೯ಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ಸೆ.18ರಂದು ಆದೇಶಿಸಲಾಗಿದೆ.

ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದೆ ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿದೆ. ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಪೊಲೀಸರು ಅಥವಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದಾಗ ಜಿಲ್ಲೆಯನ್ನು ಪ್ರವೇಶಿಸಲು ಅವಕಾಶ ನೀಡಲಾಗಿದೆ.ಪೊಲೀಸರ ಪರವಾಗಿ ಡಿಎಸ್ಪಿ ಬಂಟ್ವಾಳ ಮತ್ತು ತಿಮರೋಡಿ ಪರವಾಗಿ ವಕೀಲರು ಪ್ರಕರಣವನ್ನು ಮಂಡಿಸಿದರು. ಸರ್ಕಾರ ಅಥವಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವಿರುತ್ತದೆ.

Related posts

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!