32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

ಸುಲ್ಕೇರಿ: ಜಲ್ ಜೀವನ್ ಮಿಷನ್ ಯೋಜನೆಯಡಿ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವರ ಗ್ರಾಮವು ದ‌‌ಕ ಜಿಲ್ಲೆಯಲ್ಲೇ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು ಮಾಡುವ ಪ್ರಥಮ ಗ್ರಾಮವಾಗಿದೆ ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಹೇಳಿದರು.

ಅವರು ಸುಲ್ಕೇರಿ ಗ್ರಾಮ ಪಂಚಾಯತ್ ನ ನಾವರ ಗ್ರಾಮದ 24/ 7 ನೀರು ಸರಬರಾಜು ಗ್ರಾಮವೆಂದು ಘೋಷಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಲ್ಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜೈ ಪ್ರಕಾಶ್ ಸಿ,ತಾ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಜಯ ಕುಮಾರ್ ಉಪಸ್ಥಿತರಿದ್ದರು.

ಪಂಚಾಯತ್ ಪಿ‌ಡಿಓ ಗಾಯತ್ರಿ ಪಿ ಸ್ವಾಗತಿಸಿದರು. ಉಪಾಧ್ಯಕ್ಷ ಶುಭಕರ ಪೂಜಾರಿ ವಂದಿಸಿದರು.ಕಾರ್ಯದರ್ಶಿ ಕೊರಗಪ್ಪ ನಾಯ್ಕ,ಸದಸ್ಯರು, ಸಿಬ್ವಂದಿಗಳು ಸಹಕರಿಸಿದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya
error: Content is protected !!