September 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪನವರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.

ಜುಲೈ 25 ರಂದು ಬೆಂಗಳೂರಿನಲ್ಲಿ ಶ್ರೀ ವಿಶ್ವೇಶ್ವರ ಭಟ್ ಅವರ ನೂರನೆ ಕೃತಿ ಬಿಡುಗಡೆ ಸಮಾರಂಭದಲ್ಲಿ ನಾವು ಜೊತೆಯಾಗಿ ಭಾಗವಹಿಸಿದ್ದು ಆತ್ಮೀಯವಾಗಿ ಮಾತನಾಡಿದ್ದೆವು. ಅದು ನಮ್ಮ ಕೊನೆಯ ಭೇಟಿಯಾಗಿತ್ತು. ನೇರ ನಡೆ-ನುಡಿಯ ಸರಳ ವ್ಯಕ್ತಿತ್ವವನ್ನು ಹೊಂದಿದ್ದ ಅವರು ಕನ್ನಡ ನಾಡು-ನುಡಿ, ಸಂಸ್ಕೃತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ.

ಅವರ ಅನೇಕ ಕಾದಂಬರಿಗಳು ಹಾಗೂ ಸಾಹಿತ್ಯ ಕೃತಿಗಳು ಹಲವು ಬಾರಿ ಮರು ಮುದ್ರಣಗೊಂಡಿರುವುದಲ್ಲದೆ ಇತರ ಭಾಷೆಗಳಿಗೂ ಭಾಷಾಂತರಗೊಂಡಿವೆ. ಅವರ ಹೆಚ್ಚಿನ ಕೃತಿಗಳನ್ನು ನಾನು ಆಸಕ್ತಿಯಿಂದ ಓದಿದ್ದೇನೆ.1981ರ ನವೆಂಬರ್ 26 ರಂದು ಗುರುವಾರ ಲಕ್ಷದೀಪೋತ್ಸವ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಅವರು ಅಧ್ಯಕ್ಷತೆ ವಹಿಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ.

Related posts

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮಾಲಾಡಿ  ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
error: Content is protected !!