25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್‌ ಐ ಆಗಿ ಸೇವೆ ಪ್ರಾರಂಭಿಸಿ, ಬಳಿಕ ಯಳಂದೂರು, ಚಾಮರಾಜನಗರ, ವಿರಾಜಪೇಟೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿ ಬೆಳ್ತಂಗಡಿ, ಕಾರ್ಕಳ, ಉಡುಪಿ, ಬಳಿಕ ಡಿವೈಎಸ್‌ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ ಬೆಂಗಳೂರಿನಲ್ಲಿ ಎಸಿಪಿಯಾಗಿ ಮತ್ತೆ ಮಂಗಳೂರಿನಲ್ಲಿ ಡಿಸಿಪಿ(ಅಪರಾಧ-ಸಂಚಾರ) ವಿಭಾಗದಲ್ಲಿ ಸೇವೆ ಸಲ್ಲಿಸಿ, ೨೦೧೩ರಲ್ಲಿ ಸೇವಾ ನಿವೃತ್ತರಾಗಿದ್ದರು. ನಿವೃತ್ತರಾಗಿ ಮಂಗಳೂರಿನಲ್ಲೇ ನೆಲೆಸಿದ್ದರು.ಅವರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು, ನಾಲ್ಕು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya
error: Content is protected !!