38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಯುವ ವಿದ್ಯಾರ್ಥಿಗಳು ಯೌವ್ವನದ ಹುರುಪಿನಿಂದ ನಿಯಮ ಬಾಹಿರವಾಗಿ ನಡೆದುಕೊಳ್ಳುವುದರಿಂದ ಪ್ರಾಣಾಪಾಯ ಉಂಟಾಗಬಹುದು ಎಂದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನಿಂಗಪ್ಪ ಡಿ. ಚನ್ನಣ್ಣವರ್ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುತ್ತಾ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಅತೀ ಅವಶ್ಯಕ. ಟ್ರಾಫಿಕ್ ಸಿಗ್ನಲ್ ಗಳು, ಜೀಬ್ರಾ ಕ್ರಾಸಿಂಗ್ ಮುಂತಾದ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಚಲಾಯಿಸುವವರು ನಿರ್ದಿಷ್ಟ ದಾಖಲೆಗಳನ್ನು ಹೊಂದಿರಬೇಕು. ಅಲ್ಲದೆ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿಯನ್ನು ಹೊಂದಿರಬೇಕು. ಅಜ್ಞಾತ ಮೆಸೇಜ್, ಇಮೇಲ್, ಲಿಂಕ್ ಗಳಿಗೆ ಸ್ಪಂದನೆ ನೀಡಬಾರದು ಎಂದರು.
ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು.


ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಸ್ವಾಗತಿಸಿದರು. ಸಹಕಾರ್ಯಕ್ರಮಾಧಿಕಾರಿ ಶ್ರಾವ್ಯ ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya
error: Content is protected !!