37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

ಉಜಿರೆ: ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ಎಂಬ ವಿಷಯಾಧಾರಿತ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಪ್ರಾಂಶುಪಾಲರಾದ ಫಾ. ವಿಜಯ್ ಲೋಬೊ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಮೌಲ್ಯಗಳ ಮಹತ್ವವನ್ನು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಾಣಿ ಪಿಯು ಕಾಲೇಜಿನ ಉಪನ್ಯಾಸಕ ಸುಧೀರ್ ಕೆ.ಎನ್. ಮಾತನಾಡಿ ಸ್ವಭಾವ ನಿರ್ಮಾಣ ಮತ್ತು ಅದರ ಮೂಲಕ ಭವಿಷ್ಯ ರೂಪಿಸುವ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಅರಿವು ಮೂಡಿಸುವಂತಹ ಸಕ್ರಿಯ ಚಟುವಟಿಕೆಗಳನ್ನೂ ನಡೆಸಿ, ಅವರಲ್ಲಿ ಆತ್ಮವಿಶ್ವಾಸ ಮತ್ತು ಜವಾಬ್ದಾರಿತನ ಬೆಳೆಸುವ ಸಂದೇಶ ನೀಡಿದರು.

ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮತ್ತು ಉತ್ತಮ ಭವಿಷ್ಯ ನಿರ್ಮಾಣದ ಬಲವಾದ ಪ್ರೇರಣೆಯಾಯಿತು. ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕಿರಾದ ಅಶ್ವಿನಿ ಹಾಗೂ ರಕ್ಷಾ ನಿರ್ವಹಿಸಿದರು.

Related posts

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!