September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಅಪ್ರತಿಮ ಸಂಘಟಕ, ಏಕಾತ್ಮ ಮಾನವತೆಯ ಪ್ರತಿಪಾದಕರು, ಅಗ್ರಪಂಕ್ತಿಯ ಲೇಖಕರು, ರಾಷ್ಟ್ರವಾದಿ, ದಾರ್ಶನಿಕರು, ಮಾರ್ಗದರ್ಶಕರು ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಸೆ 25 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ದೀನ್ ದಯಾಳ್ ಉಪಾಧ್ಯಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಸಿಹಿ ಹಂಚಲಾಯಿತು.

ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ ಇವರು ದೀನ್ ದಯಾಳ್ ಉಪಾಧ್ಯಾಯರ ವ್ಯಕ್ತಿತ್ವ, ಸಾಧನೆಗಳ ಬಗ್ಗೆ ಸಂದರ್ಭೋಚಿತವಾಗಿ ಮಾತಾಡಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ ನಾವೂರು, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೇವಾ ಪಾಕ್ಷಿಕದ ಸಂಚಾಲಕರಾದ ಶ್ರೀಮತಿ ಪೂರ್ಣಿಮಾ ಜಯಂತ್, ಮಂಡಲ ಕಾರ್ಯದರ್ಶಿಗಳಾದ ಸುಂದರ್ ಹೆಗ್ಡೆ, ಶ್ರೀಮತಿ ಆಶಾ ಲಾಯಿಲ, ಪ್ರಭಾಕರ ಆಚಾರ್,ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್ ಪ್ರಭು, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಶ್ರೀಮತಿ ಪೂರ್ಣಿಮಾ ಜಯಂತ್ ಸ್ವಾಗತಿಸಿ, ಜಯಾನಂದ ಗೌಡ ಪ್ರಜ್ವಲ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ವಿದೇಶಕ್ಕೆ ಎಸ್ಕೇಪ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya
error: Content is protected !!