22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಿಲೈತ್ ಬೆಂಗಳೂರು ಹಾಗೂ ಐಎಸ್.ಟಿ.ಇ ಸಹಭಾಗಿತ್ವದೊಂದಿಗೆ ” ಎಜು – ಟೆಕ್ – ಲೈಫ್‌ಟೂಲ್ಸ್” ಎಂಬ ವಿಷಯದ ಕುರಿತು ಸೆ. 18 ಮತ್ತು 19 ರಂದು ” ಇನ್ನೋವೇಟ್-ಎ-ಥಾನ್ ” ಎನ್ನುವ ಎರಡು ದಿನದ ಹ್ಯಾಕಥಾನ್ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಹೆಲ್ತ್ಕೇರ್ ಟೆಕ್ನಾಲಜಿ ನಿರ್ದೇಶಕ ಸುನಿಲ್ ಪುರೋಹಿತ್ ಮಾತನಾಡಿ ಬದಲಾಗುತ್ತಿರುವ ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಕಲಿಕೆ, ಮತ್ತು ಸೃಜನಾತ್ಮಕ ಆಲೋಚನೆಗಳನ್ನು ಉದ್ಯಮಗಳಾಗಿ ಸ್ಟರ‍್ಟ್ಅಪ್ ಗಳ ಕಡೆಗೆ ಮುಂದುವರೆಯಬೇಕೆಂದು ವಿದ್ಯಾರ್ಥಿಗಳಿಗೆ ಉತ್ತೇಜಿಸಿದರು.

ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಗೇನ್‌ವೆಲ್ ಟೆಕ್ನಾಲಜೀಸ್‌ನ ಪ್ರಮುಖ ಉತ್ಪನ್ನ ಮುಖ್ಯಸ್ಥ ರಾಜೇಶ್ ಹಿರಿಯಣ್ಣ ಅಂತಿಮ ಸುತ್ತಿನ ತೀರ್ಪುಗಾರರಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೃತಕ ಬುದ್ಧಿಮತ್ತೆ ಮತ್ತು ಮಾನವ ಸೃಜನಶೀಲತೆಯ ಸಮನ್ವಯದ ಮಹತ್ವವನ್ನು ಅವರು ವಿವರಿಸಿದರು. ವಿದ್ಯಾರ್ಥಿಗಳಿಗೆ ಕಲಿಕೆಗೆ ಆದ್ಯತೆ ನೀಡಲು ಮತ್ತು ಸಮಯವನ್ನು ಅರ್ಥಪೂರ್ಣವಾಗಿ ಬಳಸಲು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ 22 ತಂಡಗಳು ಭಾಗವಹಿಸಿದ್ದವು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅವರು ವಿದ್ಯಾರ್ಥಿಗಳ ಭಾಗವಹಿಸುವಿಕೆ ಮತ್ತು ಆವಿಷ್ಕಾರ ಮನೋಭಾವವನ್ನು ಪ್ರಶಂಸಿದರು. ಸಿವಿಲ್‌ವಿಭಾಗದ ಸಹ ಪ್ರಾದ್ಯಾಪಕರಾದ ವಿನಯ್ ಮತ್ತು ರಾಮಪ್ರಸಾದ್ ಕಾರ್ಯಕ್ರಮವನ್ನು ಸಂಘಟಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!