September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಇಂದಬೆಟ್ಟು ವಲಯದ ಪ್ರಕೃತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕಲ್ಲಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ಶ್ರೀಮತಿ ದೀಪಾ ರವರು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಮೂಲಕ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಮಹಿಳೆಯರು ನಾಲ್ಕು ಗೋಡೆಯ ಮಧ್ಯದಿಂದ ಹೊರಗೆ ಬಂದು ಮಾಹಿತಿಯೊಂದಿಗೆ ಅವರ ಪ್ರತಿಭೆಗಳನ್ನು ಹೊರಹಾಕಲು ಉತ್ತಮ ಅವಕಾಶಗಳನ್ನು ಒದಗಿಸಿ ಕೊಟ್ಟಿದ್ದು ಕಾರ್ಯಕ್ರಮದ ಶಿಸ್ತುಗಳೇ ಇದಕ್ಕೆ ಪ್ರತ್ಯಕ್ಷ ಸಾಕ್ಷಿಗಳಾಗಿವೆ ಎಂದರು.

ಯೋಜನಾಧಿಕಾರಿ ಯಶೋಧರ ರವರು ಜ್ಞಾನವಿಕಾಸ ಕೇಂದ್ರದ ಹುಟ್ಟು ಮತ್ತು ದ್ಯೆಯೋದ್ದೇಶದ ಬಗ್ಗೆ ತಿಳಿಸುತ್ತಾ ಕೇಂದ್ರದಲ್ಲಿ ಉತ್ತಮ ರೀತಿಯಲ್ಲಿ ಭಾಗವಹಿಸುದರೊಂದಿಗೆ ಕಾರ್ಯಕ್ರಮದ ಸದುಪಯೋಗವನ್ನು ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆನಂದ ಅಡಿಲು, ಬಂಗಾಡಿ ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಇರ್ತಿಲಾಲ್ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಆನಂದ, ಒಕ್ಕೂಟದ ಅಧ್ಯಕ್ಷ ಸುಧಾಕರ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಶ್ರೀಮತಿ ಕುಸುಮ ವಹಿಸಿದ್ದರು. ಶ್ರೀಮತಿ ನಿರ್ಮಲ ಕೇಂದ್ರದ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಮೇಲ್ವಿಚಾರಕ ಶ್ರೀಮತಿ ಉಷಾ , ಸೇವಾ ಪ್ರತಿನಿಧಿಯಾದ ಶ್ರೀಮತಿ ಸುನಿತಾ ಹಾಗೂ ಪುಷ್ಪಾವತಿ ಉಪಸ್ಥಿತರಿದ್ದರು. ಶ್ರೀಮತಿ ವಾರಿಜ ಪ್ರಾರ್ಥಿಸಿ, ಶ್ರೀಮತಿ ಶ್ರುತಿ ಸ್ವಾಗತಿಸಿ, ಸೌಮ್ಯ ಧನ್ಯಾವಾದವಿತ್ತರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರ ವಸಂತ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸದಸ್ಯರಿಗೆ ಬಹುಮಾನವನ್ನು ವಿತರಿಸಲಾಯಿತು. ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು.

Related posts

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

Suddi Udaya

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya
error: Content is protected !!