September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ‌.17 ಮತ್ತು 18 ರಂದು ಎಸ್.ಐ.ಟಿ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಎರಡನೇ ದಿನದಲ್ಲಿ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಪತ್ತೆಹಚ್ಚಲಾಗಿತ್ತು. ಇದೀಗ ಮತ್ತೊಬ್ಬನ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಎಸ್.ಐ.ಟಿ ಪತ್ತೆ ಹಚ್ಚಿ ಕಚೇರಿಗೆ ಕರೆದು ಮಾಹಿತಿ ಕಲೆ ಹಾಕಿದೆ.

2-10-2013 ರಂದು ಬೆಂಗಳೂರು ಬಾರ್ ಕೆಲಸಕ್ಕೆ ಹೋಗುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಬೋಜಪ್ಪ ಮತ್ತು ಚೆನ್ನಮ್ಮ ಮೂರನೇ ಮಗ ಆದಿಶೇಷ ನಾರಾಯಣ(27ವ) ಯುವಕ ಮನೆಗೆ ಬಂದು ಮೊಬೈಲ್ ಇಟ್ಟು ಮನೆಬಿಟ್ಟು ನಾಪತ್ತೆಯಾಗಿದ್ದವನ ಅಸ್ಥಿಪಂಜರ ಎಂದು ಎಸ್.ಐ.ಟಿ ಡ್ರೈವಿಂಗ್ ಲೈಸೆನ್ಸ್ ಕಾರ್ಡ್ ಮೂಲಕ ಪತ್ತೆಹಚ್ಚಿದೆ. ಈ ಸಂಬಂಧ ಆದಿಶೇಷನ ಕುಟುಂಬ ಸದಸ್ಯರು ಸೆ.25 ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದು ಡ್ರೈವಿಂಗ್ ಲೈಸೆನ್ಸ್ ಮತ್ತು ಫೋಟೋ ಮೂಲಕ ಖಚಿತ ಪಡಿಸಿಕೊಂಡು ನಾಪತ್ತೆ ಬಗ್ಗೆ ಮಾಹಿತಿ‌ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಎನ್.ಎ ಮಾಡಿಸುವುದಾಗಿ ಹೇಳಿ ಕಳುಹಿಸಿದ್ದಾರೆ ಎಂದು ಆದಿಶೇಷ ಅಕ್ಕ ಪದ್ಮ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಆದಿಶೇಷ ನಾರಾಯಣ ಪದೆ ಪದೆ ಮನೆ ಬಿಟ್ಟು ಹೋಗಿ ವಾಪಸ್ ಬರುತ್ತಿದ್ದ ಕಾರಣದಿಂದ ನಾಪತ್ತೆಯಾಗಿರುವ ಬಗ್ಗೆ ಕುಟುಂಬ ಸದಸ್ಯರು ಯಾರು ಕೂಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!