24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

ಬೆಳ್ತಂಗಡಿ: ಸಾಹಿತಿಕವಾಗಿ ಮತ್ತು ಸಾಮಾಜಿಕವಾಗಿ ತುಂಬು ಬದುಕನ್ನು ನಡೆಸಿದ ಎಸ್ ಎಲ್ ಭೈರಪ್ಪ ಅವರ ವ್ಯಕ್ತಿತ್ವ ಆದರ್ಶಪ್ರಾಯವಾದದ್ದು ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಅಭ್ಯುದಯ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ಜರುಗಿದ ಎಸ್ ಎಲ್ ಬೈರಪ್ಪ ಅವರಿಗೆ ನುಡಿ ನಮನ ಸಲ್ಲಿಸುತ್ತಾ, ಭೈರಪ್ಪ ಅವರ ಕೃತಿಗಳಲ್ಲಿ ಎಲ್ಲವನ್ನೂ ಪ್ರಶ್ನಿಸುವಂತಹ ಮನೋಧಾಡ್ಯತೆ ಕಂಡು ಬರುತ್ತಿದ್ದು ಸಾಮಾಜಿಕ ಸಂಘರ್ಷ, ಇತಿಹಾಸ, ಧರ್ಮ, ಶಿಕ್ಷಣ, ತತ್ವಶಾಸ್ತ್ರ ಮುಂತಾದ ವಿಷಯಗಳು ತಿಳಿದು ಬರುತ್ತದೆ. ಮನುಷ್ಯ ಸಂಬಂಧದ ಆಳಕ್ಕೆ ಇಳಿದು ನೈತಿಕ ಮೌಲ್ಯಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು ಭೈರಪ್ಪರಂತಹ ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ ಹಾಗೂ ವಿಚಾರಗಳನ್ನು ತಿಳಿದುಕೊಳ್ಳುವುದು ಅಗತ್ಯವಿದೆ ಎಂದರು.


ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ರಮ್ಯಾ ಜೋಶಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!