ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

ಬೆಳ್ತಂಗಡಿ: ಜೈನ ಬಸದಿಗಳ ಮುಖ್ಯ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲ ಆಗುವಂತೆ ಮಾಸಿಕ ಗೌರವಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುದಾನವನ್ನು ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಿರುತ್ತಾರೆ.

ಈ ಯೋಜನೆ ಪ್ರಥಮ ಬಾರಿಗೆ ಜಾರಿಯಾಗುತ್ತಿರುವುದು ನಮಗೆಲ್ಲ ಸಂತೋಷವನ್ನುಂಟು ಮಾಡಿದೆ. ಯೋಜನೆಯನ್ನು ಜಾರಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ರವರಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಝಮೀರ್ ರವರಿಗೆ ಹಾಗೂ ಈ ಯೋಜನೆಯನ್ನು ಜಾರಿಗೊಳಿಸುವಲ್ಲಿ ಶ್ರಮವಹಿಸಿದ ಸಮಾಜ ಭಾಂದವರಾದ ಎಚ್. ನಾಭಿರಾಜ ಜೈನ್. ಹಾಗೂ ಕರ್ನಾಟಕ ಸರಕಾರಕ್ಕೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!