23.5 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕರು ಹಾಗೂ ಸಿರಿ ಆಡಳಿತ ಮಂಡಳಿಯ ಅಧ್ಯಕ್ಷರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಿರಿ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾಗಿರುವ ಹೇಮಾವತಿ ವೀ. ಹೆಗ್ಗಡೆಯವರು ಸೆ.25 ರಂದು ಬೆಳ್ತಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಸಿರಿ ಕೇಂದ್ರ ಕಛೇರಿಗೆ ಭೇಟಿ ನೀಡಿದರು.

ಸಿರಿ ಸಂಸ್ಥೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಹೆಗ್ಗಡೆ ದಂಪತಿಗಳು, ಇಲ್ಲಿ ನಡೆಯುತ್ತಿರುವ ವಿವಿಧ ಉತ್ಪನ್ನಗಳ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ನವರಾತ್ರಿ ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿದ ಅವರು ನವರಾತ್ರಿಯು ಶಕ್ತಿ, ಬುದ್ಧಿವಂತಿಕೆ, ಧೈರ್ಯ, ಭಕ್ತಿ ಮತ್ತು ರಕ್ಷಣೆಯಂತಹ ವಿಭಿನ್ನ ಗುಣಗಳ ಸ್ವರೂಪವಾಗಿರುವ ನವದುರ್ಗೆಯರ ಪೂಜೆಗೆ ಸಮರ್ಪಿತವಾಗಿದೆ. ಸಿರಿಯಲ್ಲಿ ದುಡಿಯುವ ಮಹಿಳೆಯರು ಕೂಡಾ ಸಿರಿಯ ಶಕ್ತಿ ಸ್ವರೂಪಿಣಿಯರಾಗಿದ್ದು, ಎಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ದುಡಿದು ಸಿರಿ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸಿ, ಮುನ್ನಡೆಸುವ ಮೂಲಕ ಇನ್ನೂ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ದೊರೆತು ನೆಮ್ಮದಿಯ ಜೀವನ ನಡೆಸುವಂತಾಗಲಿ, ಎಲ್ಲರಿಗೂ ನವದುರ್ಗೆಯರ ಆಶೀರ್ವಾದವಿರಲಿ ಎಂದು ಶುಭ ಹಾರೈಸಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕರಾದ ಕೆ.ಎನ್ ಜನಾರ್ಧನರವರು ಹೆಗ್ಗಡೆ ದಂಪತಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಗೌರವಾರ್ಪಣೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್ ಪೈ, ಸಿರಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಮಹಾವೀರ ಅಜ್ರಿ, ಸಿರಿ ಸಂಸ್ಥೆಯ ಆಡಳಿತ ಮತ್ತು ಲೆಕ್ಕಪತ್ರ ವಿಭಾಗದ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ, ಮಾರುಕಟ್ಟೆ ವಿಭಾಗ ಮತ್ತು ವಿವಿಧ ಉತ್ಪಾದನಾ ವಿಭಾಗಗಳ ಮೇಲಾಧಿಕಾರಿಗಳು, ಮೇಲ್ವಿಚಾರಕರು, ಗೋದಾಮು ಪ್ರಬಂಧಕರು ಹಾಗೂ ಸಿರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya
error: Content is protected !!