March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

ತೋಟತ್ತಾಡಿ : ಧರ್ಮರಕ್ಷಾ ವೇದಿಕೆ, ತೋಟತ್ತಾಡಿ ಇದರ ಆಶ್ರಯದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಸೆ.29 ರಂದು ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ ಎಸ್.ಎನ್.ಡಿ.ಪಿ ಶಾಖೆ, ಬೆಂದ್ರಾಳ ತೋಟತ್ತಾಡಿಯಲ್ಲಿ, ನಡೆಯಲಿದೆ.

ಬೆಳಿಗ್ಗೆ ವೇದಮೂರ್ತಿ ಶ್ರೀ ವಾದಿರಾಜ ಶಬರಾಯ ಉಜಿರೆ ಇವರ ಪೌರೋಹಿತ್ಯದಲ್ಲಿ,”ಗಣಹೋಮ ಹಾಗೂ ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠೆ”.ನಂತರ ಆಹ್ವಾನಿತ ವಿವಿಧ ಭಜನಾ ತಂಡಗಳಿಂದ ಭಜನೆ, ಧಾರ್ಮಿಕ ಸಭಾ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಕ್ಸೆಲ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ| ಪ್ರಜ್ವಲ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡರು ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಚಾರ್ಮಾಡಿ ಗ್ರಾಂ ಪಂ ಅಧ್ಯಕ್ಷೆ ಶ್ರೀಮತಿ ಶಾರದಾ ಎ, ನಾರಾಯಣ ಗುರು ಎಸ್.ಎನ್.ಡಿ.ಪಿ ಸಂಘದ ಅಧ್ಯಕ್ಷ ಸುರೇಶ್ ಎಂ ಎನ್, ಭಾಗವಹಿಸಲಿದ್ದು, ಧರ್ಮರಕ್ಷಾ ವೇದಿಕೆ, ತೋಟತ್ತಾಡಿ ಇದರ ಅಧ್ಯಕ್ಷರಾದ ಶ್ರೀ ಶಿವಪ್ರಸಾದ್ ಮಡಿಯೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ, ಮಧ್ಯಾಹ್ನ “ಮಹಾಪೂಜೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ”, ಮಧ್ಯಾಹ್ನ ವಿವಿಧ ಆಹ್ವಾನಿತ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ಸಂಜೆ ಮಹಾಪೂಜೆ ನಂತರ ಶ್ರೀ ಶಾರದಾ ದೇವಿ ಮೂರ್ತಿಯ ವೈಭವಯುತ ಶೋಭಾಯಾತ್ರೆ ನಡೆಯಲಿದೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya
error: Content is protected !!