September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

ಉಜಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ. ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ಸಮುದಾಯ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಐಇಸಿ /ಹೆಚ್. ಆರ್. ಡಿ. ಚಟುವಟಿಕೆಗಳನ್ನು ನಡೆಸಲು ಸದಸ್ಯರಿಗೆ ತರಬೇತಿ ಕಾರ್ಯಾಗಾರ ಸೆ. 26ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಉದ್ಘಾಟಿಸಿ ಶುಭ ಹಾರೈಸಿದರು. ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ, ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯ ಕುಮಾ‌ರ್, ಜಿ.ಪಂ. ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ವಿಘ್ನಶ್ ರಾಜ್ ಬಿ. ಕೆ., ಗ್ರಾಮೀಣ ಕುಡಿಯುವ ನೀರು ಇಲಾಖೆಯ ಜೆ. ಇ. ಲಕ್ಷ್ಮೀ, ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ನಂತರ ಜೆಲಜೀವನ್ ಮಿಷನ್ ಯಶಸ್ವಿ ಕಾರ್ಯಾಚರಣೆ ಬಗ್ಗೆ ಸುರೇಶ್ ಬಾಳಿಲ, ಅಸ್ಮಿತಾ, ನಾಗಲಿಂಗಯ್ಯ ಸ್ವಾಮಿ, ಶರತ್ ಕುಮಾರ್ ಹಾಜರಿದ್ದು ವಿವಿಧ ತರಬೇತಿ ನೀಡಿದರು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಕಾರ್ಯಕರ್ತರು ತರಬೇತಿ ಶಿಬಿರದಲ್ಲಿ ಪಾಲ್ಗೊಂದಿದ್ದರು. ಜೆ ಜೆ ಎಂ ತಂಡದ ನಾಯಕ ಮಿಥುನ್ ಕುಮಾರ್, ಸಂಯೋಜಕಿ ಧರ್ಮಶ್ರೀ, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು, ಸಹಕರಿಸಿದರು. ಜೆಜೆಎಂ ಸಂಯೋಜಕ ಶಿವರಾಮ ಪಿ. ಬಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!