September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ಹಾಗೂ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಸೆ.25 ರಂದು ಪುತ್ತೂರು ಶಂಕರ ಗ್ರೂಪ್ ನ ಮೇಘ ಫ್ರೂಟ್ ಪ್ರೊಸೆಸಿಂಗ್ ಪ್ರೈವೆಟ್ ಲಿಮಿಟೆಡ್ ಬಿಂದು ಕಂಪನಿಗೆ ಕೈಗಾರಿಕಾ ಅಧ್ಯಯನ ಪ್ರವಾಸ ಕೈಗೊಂಡರು.

ಈ ಕೈಗಾರಿಕ ಅಧ್ಯಯನ ಪ್ರವಾಸದಲ್ಲಿ ಒಟ್ಟು 77ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಲ್ಲಿನ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ , ವಿದ್ಯಾರ್ಥಿಗಳಿಗೆ ಕೈಗಾರಿಕೆಯ ಕಾರ್ಯವಿಧಾನದ ಬಗ್ಗೆ ಉತ್ತಮವಾದ ಮಾಹಿತಿಯನ್ನು ನೀಡಿದರು.

ಈ ಕೈಗಾರಿಕ ಅಧ್ಯಯನ ಪ್ರವಾಸದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ಇಂಗ್ಲೀಷ್ ಉಪನ್ಯಾಸಕರಾದ ಸುಭಕರ್ ಇವರು ಉತ್ಸಾಹದಿಂದ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಕೈಗಾರಿಕೆಯ ಕಾರ್ಯವಿಧಾನ, ಉತ್ಪಾದನಾ ಕ್ರಮ ಮತ್ತು ನವೀನ ತಂತ್ರಜ್ಞಾನಗಳ ಬಗ್ಗೆ ವಿದ್ಯಾರ್ಥಿಗಳು ನೇರವಾಗಿ ಅವಲೋಕನ ನಡೆಸಿ ಪಾರದರ್ಶಕ ಜ್ಞಾನವನ್ನು ಸಂಪಾದಿಸಿದರು.

ಇಂತಹ ಅಧ್ಯಯನ ಪ್ರವಾಸಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾಗಿದ್ದು, ಭವಿಷ್ಯದ ವೃತ್ತಿಜೀವನಕ್ಕೆ ಮಾರ್ಗದರ್ಶಕವಾಗುತ್ತದೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು .

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

​ವಿದ್ಯಾಮಾತಾ ಅಕಾಡೆಮಿ, ಪುತ್ತೂರು: GPSTR, PSTR ಹಾಗೂ HSTR ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ!

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya
error: Content is protected !!