September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

ಬೆಳ್ತಂಗಡಿ: ತಾಲೂಕಿನಲ್ಲಿ ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ಪ್ರಾರಂಭವಾಗಿ ಐದನೇ ದಿನಕ್ಕೆ ಕಾಲಿಟ್ಟಿದ್ದರೂ ಸಮೀಕ್ಷಾ ಆಪ್ ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವ ಬಗ್ಗೆಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೆಳ್ತಂಗಡಿ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯ ಮೂಲಕ ಸರಕಾರಕ್ಕೆ ಮನವಿ ನೀಡಲಾಯಿತು.

ಗಣತಿದಾರ ಶಿಕ್ಷಕರು ಹತ್ತಾರು ಕಿ.ಮೀ ದೂರ ಪ್ರಯಾಣ ಮಾಡಿ ಬೆಳಗ್ಗಿನಿಂದ ಸಂಜೆಯವರೆಗೆ ಶಿಕ್ಷಕರು ಊಟ, ತಿಂಡಿ ಸಿಗದ ಜಾಗದಲ್ಲಿ ಸಮೀಕ್ಷೆ ಒಂದೂ ಪೂರ್ಣಗೊಳ್ಳಲು ಸಾಧ್ಯವಾಗದೇ ಹಿಂದಿರುಗಿದ್ದಾರೆ . ಸಾಮಾನ್ಯ ಜನರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಇಚ್ಚಿಸದೆ ಗಣತಿದಾರ ಶಿಕ್ಷಕರನ್ನು ಅನುಮಾನದಿಂದ ನೋಡುತ್ತಿರುವ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಹಾಗಾಗಿ ಜನಸಾಮಾನ್ಯರಿಗೆ ಜಾಗೃತಿ ಮೂಡಿಸಿ ನಂತರ ಸಮೀಕ್ಷೆ ಮಾಡಲು ಅನುವು ಮಾಡಿಕೊಡಬೇಕು.

ನೆಟ್ವರ್ಕ್ ಸಮಸ್ಯೆ ಇರುವ ಕಡೆ ಆಪ್ ಓಪನ್ ಆಗುವುದೇ ಇಲ್ಲ ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕು. 150ಕ್ಕೂ ಅಧಿಕ ಮನೆಗಳನ್ನು ಮ್ಯಾಪಿಂಗ್ ಮಾಡಿರುವುದು ನಮ್ಮ ಜಿಲ್ಲೆ ದಕ್ಷಿಣ ಕನ್ನಡದಂತಹ ಭೌಗೋಳಿಕವಾಗಿ ಗುಡ್ಡಗಾಡಿನಿಂದ ಕೂಡಿರುವ ಸ್ಥಳಗಳಲ್ಲಿ ಅಷ್ಟು ಮನೆಗಳ ಸಮೀಕ್ಷೆ ನಡೆಸುವುದು ಕಷ್ಟಸಾಧ್ಯವಾಗಿದ್ದು ನಮ್ಮ ಜಿಲ್ಲೆಗೆ ಕೇವಲ 100 ಮನೆಗೆ ಸೀಮಿತಗೊಳಿಸಿ ಸಮೀಕ್ಷೆ ಮಾಡಲು ಅನುವು ಮಾಡಿಕೊಡಬೇಕು. ಮಹಿಳಾ ಶಿಕ್ಷಕರು ಗುಡ್ಡಗಾಡು ಪ್ರದೇಶದಲ್ಲಿ ಒಬ್ಬರೇ ಸಮೀಕ್ಷೆ ಮಾಡುವುದು ಕಷ್ಟಸಾಧ್ಯವಾಗಿದ್ದು ಅವರಿಗೆ ಸಹಾಯಕರ ನೇಮಕ ಮಾಡಿ ಆದೇಶಿಸಬೇಕು.

ಈ ಮೇಲ್ಕಂಡ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ಜೊತೆಗೆ ಆಯಪ್‌ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಆಗುವವರೆಗೆ ಸಮೀಕ್ಷಾ ಕಾರ್ಯದಿಂದ ಶಿಕ್ಷಕರಿಗೆ ವಿನಾಯಿತಿ ಕೊಡಿಸಬೇಕೆಂದು ಎಂದು ಮನವಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್, ಕಾರ್ಯದರ್ಶಿ ಸುರೇಶ್ ಮಾಚಾರು, ಜಿ ಪಿ ಟಿ. ಶಿಕ್ಷಕರ ಸಂಘದ ಅಧ್ಯಕ್ಷ ಯೋಗೀಶ್ ಎಚ್ ಆರ್ , ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಅಖಿಲೇಶ್ ಕುಮಾರ್ ಕಾರ್ಯದರ್ಶಿ ನಿರಂಜನ್ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್ ಕಾರ್ಯದರ್ಶಿ ವಿಕಾಸ್ ಕುಮಾರ್ , ಪ್ರಾಥಮಿಕ ಸಂಘದ ಮಹಿಳಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಪರಿಸರ ದಿನಾಚರಣೆ- ಗೋ ಗ್ರೀನ್ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya
error: Content is protected !!