28.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

ಬೆಳ್ತಂಗಡಿ: ಕೆಲ ತಿಂಗಳ ಹಿಂದೆ ಸುಪ್ರೀಂ ಕೋರ್ಟ್‌ಗೆ ಚಿನ್ನಯ್ಯನ ಮೂಲಕ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ 05-05-2025 ರಂದು ವಜಾಗೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.


2025 ಮೇ 5 ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ವಕೀಲರಾದ ಕೆ.ವಿ. ಧನಂಜಯ್ ಹಾಗೂ ಅವರ ವಕೀಲರ ತಂಡದ ಮೂಲಕ ಚಿನ್ನಯ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದ್ದರು. ಆ ಪಿಐಎಲ್‌ ಅರ್ಜಿ ಮಾನ್ಯ ಸುಪ್ರೀಂ ಕೋರ್ಟ್‌ನ ಗೌರವಾನ್ವಿತ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹಾಗೂ ಸತೀಶ್‌ ಚಂದ್ರ ಶರ್ಮ ಅವರ ದ್ವಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.


ಈ ಸಂದರ್ಭದಲ್ಲಿ 1995 ರಿಂದ 2004 ರ ವರೆಗೆ ನಡೆದ ಘಟನೆಗಳ ಬಗ್ಗೆ 20 ವರ್ಷಗಳ ನಂತರ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ದೀರ್ಘಕಾಲೀನ ವಿಳಂಬಕ್ಕೆ ಯಾವುದೇ ಸಕಾರಣಗಳನ್ನು ನೀಡಲಾಗಿಲ್ಲ. ಈ ಸಾರ್ವಜನಿಕ ಹಿತಾಸಕ್ತಿಯಲ್ಲಿ ಯಾವುದೇ ಹುರುಳಿಲ್ಲ. ಮಾತ್ರವಲ್ಲದೇ ಈ ಸಾರ್ವಜನಿಕ ಹಿತಾಸಕ್ತಿ ಈ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಮಾನ್ಯ ಸರ್ವೋಚ್ಛ ನ್ಯಾಯಾಲಯ ಹೇಳಿದೆ.


ಇದು ‘ಪಬ್ಲೀಕ್ ಇಂಟ್ರೆಸ್ಟ್ ಲಿಟೀಗೇಷನ್’ ಎನ್ನುವ ಬದಲು ‘ಪಬ್ಲಿಸಿಟಿ ಇಂಟ್ರೆಸ್ಟ್ ಲಿಟಿಗೇಷನ್ ಪೈಸಾ ಇಂಟ್ರೇಸ್ಟ್ ಲಿಟೀಗೇಷನ್, ಪ್ರೈವೇಟ್ ಪೊಲೀಟೀಕಲ್ ಇಂಟ್ರೇಸ್ಟ್ ಲಿಟೀಗೇಷನ್ ‘ ಎಂದು ಭಾವಿಸಬಹುದು ಎಂದು ಅಭಿಪ್ರಾಯ ಪಟ್ಟು ಅರ್ಜಿ ಮಾನ್ಯ ಮಾಡುವಂತಿಲ್ಲ ಎಂದು ಮೇ.5ರಂದು ಅಜಿ೯ ವಜಾ ಗೊಳಿಸಿತ್ತು.


ಇದಾದ ಬಳಿಕ ಜುಲೈ ತಿಂಗಳಲ್ಲಿ ಚಿನ್ನಯ್ಯನ ಮೂಲಕ ಬೆಳ್ತಂಗಡಿ ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಲಾಗಿದ್ದು, ನಂತರದ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟವಾಗಿ ರೂಪು ಪಡೆಯಿತು. ಸರ್ಕಾರ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿತು.ಎಸ್‌ಐಟಿ ತನಿಖೆ ನಡೆಯುತ್ತಿರುವ ಹಂತದಲ್ಲಿಯೇ, ಪುರಂದರ ಗೌಡ ಹಾಗೂ ತುಕಾರಾಂ ಗೌಡ ಹೈಕೋರ್ಟ್‌ಗೆ ರಿಟ್‌ ಅರ್ಜಿಯನ್ನು ಸಲ್ಲಿಸಿ, ಚಿನ್ನಯ್ಯ ನೀಡಿದ ದಾಖಲೆ ಹಾಗೂ ಹೇಳಿಕೆ ಆಧರಿಸಿ ಇನ್ನಷ್ಟು ವಿಚಾರಗಳು ನಮಗೆ ತಿಳಿದಿವೆ. ಈ ವಿಚಾರಗಳನ್ನು ಎಸ್‌ಐಟಿ ತನಿಖೆ ನಡೆಸಬೇಕು ಎಂದು ಅರ್ಜಿ ಹಾಕಿರುವುದು ಗಮನಾರ್ಹವಾಗಿದೆ.


ತುಕಾರಾಂ ಗೌಡ ಮತ್ತು ಪುರಂದರ ಗೌಡ ಸಲ್ಲಿಸಿದ ರಿಟ್‌ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ, ಮಾನ್ಯ ಕರ್ನಾಟಕ ಹೈಕೋರ್ಟ್‌ ಪ್ರಕರಣದ ತನಿಖೆ ಬಗ್ಗೆ ವರದಿ ನೀಡುವಂತೆ ವಿಶೇಷ ಸರ್ಕಾರಿ ಅಭಿಯೋಜಕರಿಗೆ ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರು ಚಿನ್ನಯ್ಯ ನೀಡಿರುವ ದೂರು ಸುಳ್ಳಿನಿಂದ ಕೂಡಿದೆ, ಆತ ತೋರಿಸಿದ್ದ 13 ಸ್ಥಳಗಳಲ್ಲಿ ಉತ್ಖನನ ಮಾಡಲಾಗಿದ್ದು, ಒಂದು ಸ್ಥಳದಲ್ಲಿ ಸಿಕ್ಕ ಅಸ್ತಿಪಂಜರ ಗಂಡಸಿನದ್ದಾಗಿದೆ ಎಂದು ಮಾನ್ಯ ನ್ಯಾಯಾಲಯದ ಗಮನಕ್ಕೆ ತಂದಿದ್ದರು.


ಸುಜಾತಾ ಭಟ್ ಎಂಬ ಮಹಿಳೆ ನೀಡಿದ ದೂರಿನ ಬಗ್ಗೆಯೂ ಉಲ್ಲೇಖ ಮಾಡಿದ ವಿಶೇಷ ಸರ್ಕಾರಿ ಅಭಿಯೋಜಕರು, ಅನನ್ಯ ಭಟ್ ಎಂಬ ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ಸುಳ್ಳಾಗಿದ್ದು, ಆ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದ್ದಾರೆ.

Related posts

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya
error: Content is protected !!