September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಬೆಳ್ತಂಗಡಿ ತಹಶೀಲ್ದಾ‌ರ್ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದರು.

ಈ ಗಡಿಪಾರು ಆದೇಶದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಸೆ.25 ಬೆಳ್ತಂಗಡಿ ತಹಶೀಲ್ದಾರ್ ಗೆ ಸೆ.29 ರಂದು ಬೆಳ್ತಂಗಡಿ ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಬೆಳ್ತಂಗಡಿ ಪೊಲೀಸರು ಪ್ರತಿಭಟನೆ ಅರ್ಜಿ ಪರಿಶೀಲನೆ ಮಾಡಿ ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಆಗುವ ಸಂಭವ ಇರುವುದಾಗಿ ತಿಳಿಸಿ ಅನುಮತಿ ನೀಡದಂತೆ ಅಭಿಪ್ರಾಯ ನೀಡಿದ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೆ.26 ರಂದು ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಹಿಂಬರಹ ನೀಡಿದ್ದಾರೆ.

Related posts

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಆಚರಣೆ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya
error: Content is protected !!