September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಗೇರುಕಟ್ಟೆ : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯಲ್ಲಿ ಪೋಷನ್ ಮಾಸಾಚರಣೆ ಅಂಗವಾಗಿ ಪೌಷ್ಟಿಕಾಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು.

ಗೇರುಕಟ್ಟೆ ಆರೋಗ್ಯ ಕೇಂದ್ರದ ಸಿ.ಹೆಚ್.ಓ. ಆರೋಗ್ಯಧಿಕಾರಿ ನಾಗರಾಜ್ ಉತ್ತಮ ಆರೋಗ್ಯ ನಾವು ಸೇವಿಸುವ ಗುಣಮಟ್ಟದ ಆಹಾರ ಸೇವಿಸುವುದರಿಂದ ಶಾರೀರಿಕವಾಗಿ, ದೈಹಿಕ ಸಾಮರ್ಥ್ಯ ಹೊಂದಲು ಸಾಧ್ಯ. ಅಲ್ಲದೆ ಅಪೌಷ್ಟಿಕತೆಯಿಂದ ಮುಕ್ತಿ ಪಡೆಯಲು ಪೌಷ್ಠಿಕಾಹಾರಗಳ ಸೇವನೆಯಲ್ಲಿ ಮಕ್ಕಳ ಮನವೊಲಿಸುವಲ್ಲಿ ಪೋಷಕರ ಕೆಲಸವಾಗಬೇಕು ಎಂದು ಹೇಳಿದರು.

ಸೊಪ್ಪು, ತರಕಾರಿಗಳನ್ನು ಸೇವಿಸುವ ಮೂಲಕ ಆರೋಗ್ಯದ ಜೀವನ ನಡೆಸಲು ಸಾಧ್ಯ. ಮಾತ್ರವಲ್ಲದೇ ಮಾರುಕಟ್ಟೆಯಲ್ಲಿ ಸಿಗುವ ಪಾಸ್ಟ್ ಪುಡ್, ತಿಂಡಿ, ತಿನಿಸುಗಳನ್ನು ಮಕ್ಕಳಿಗೆ ಕೊಡುವುದರಿಂದ ಮಕ್ಕಳ ಆರೋಗ್ಯ ಮತ್ತು ಭವಿಷ್ಯದಲ್ಲಿ ತೊಂದರೆಗಳು ಉಂಟಾಗುತ್ತದೆ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ಸಿಗುವ ಆಹಾರ, ಪದಾರ್ಥ ಮತ್ತು ಸಲಹೆಗಳಿಂದ ನಮ್ಮ ಜೀವನದಲ್ಲಿ ಉತ್ತಮ ಆರೋಗ್ಯ ಸಿಗುತ್ತದೆ ಎಂದು ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಹೇಳಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ನೀತಾ ಸತೀಶ್ ಸಭೆಯ ಅಧ್ಯಕ್ಷತೆ ವಹಿಸಿದರು.ಗರ್ಭಿಣಿ ಅರ್ಪಿತಾ ಅವರಿಗೆ ಸಿಮಂತ ಮಾಡಿದರು. ರಿಝ್ಮಾ ಫಾತಿಮ ಮಗುವಿಗೆ ಅನ್ನ ಪ್ರಶಾನ್ನ ನೀಡಿದರು. ಮಕ್ಕಳ ಪೋಷಕರು ಮನೆಯಲ್ಲಿ ತಯಾರಿಸಿ ತಂದಿರುವ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿ, ಸಾಮೂಹಿಕವಾಗಿ ಎಲ್ಲಾರು ಭೋಜನ ಸೇವಿಸಿದರು.

ಅಂಗನವಾಡಿ ಸಹಾಯಕಿ ಗೀತಾ ಸಹಕರಿಸಿದರು. ಲತಾಲಾಕ್ಷಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್.ನಿರೂಪಿಸಿ, ವಂದಿಸಿದರು.

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya
error: Content is protected !!