September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ


ಧರ್ಮಸ್ಥಳ: ಕರ್ನಾಟಕ ಬ್ಯಾಂಕ್ ವತಿಯಿಂದ ಸೆ.29 ರಂದು ಧರ್ಮಸ್ಥಳಕ್ಕೆ ವಾಹನವನ್ನು ಕೊಡುಗೆಯಾಗಿ ಅರ್ಪಿಸಿದರು.
ಕರ್ನಾಟಕ ಬ್ಯಾಂಕಿನ ಎಂ.ಡಿ. ಮತ್ತು ಸಿ.ಇ.ಒ ರಾಘವೇಂದ್ರ ಶ್ರೀನಿವಾಸ ಭಟ್, ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ  ವಾದಿರಾಜ ಭಟ್ ಮತ್ತು ಉಡುಪಿ ರಥಬೀದಿ ಶಾಖೆಯ ಹಿರಿಯ ಶಾಖಾ ಪ್ರಬಂಧಕ ಪ್ರಶಾಂತ್ ಎಂ. ರಾವ್ ವಾಹನವನ್ನು ಕೊಡುಗೆಯಾಗಿ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಶ್ರೀ ಜಗದೀಶ್, ಮ್ಯಾನೇಜರ್, ಫೋರ್ಸ್ ಮೋಟಾರ್ಸ್. ಮನೀಶ್ ಫೋರ್ಸ್ ಸೇಲ್ಸ್ ಎಕ್ಸಿಕ್ಯುಟಿವ್ ಫೋರ್ಸ್ ಮೋಟಾರ್ಸ್, ಆಕಾಶ್ ಸೇಲ್ಸ್ ಎಕ್ಸಿಕ್ಯುಟಿವ್ ಫೋರ್ಸ್ ಮೋಟಾರ್ಸ್ ಉಪಸ್ಥಿತರಿದ್ದರು.
ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಬ್ಯಾಂಕಿಗೆ ಕೃತಜ್ಞತೆ ಸಲ್ಲಿಸಿ ಈ ವಾಹನವನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಗಳಿಗೆ  ಬಳಸಲಾಗುವುದು ಎಂದು ಹೇಳಿದರು.

Related posts

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!