September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ ಸೆ. 29ರಂದು ನಡೆಯಿತು.

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ನಿರ್ಮಿಸಿರುವ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಶಾರದಾ ಮಾತೆಯ ವಿಗ್ರಹವನ್ನು ಶಿಕ್ಷಣ ಸಂಸ್ಥೆಗೆ ಉಡುಗೊರೆಯಾಗಿ ನೀಡಿದ್ದರು.ಈ ನಿಟ್ಟಿನಲ್ಲಿ ಸಂಸ್ಥೆಯ ಆವರಣದಲ್ಲಿ ಸುಂದರವಾದ ಪೀಠ ನಿರ್ಮಾಣ ಮಾಡಿ ನವರಾತ್ರಿಯ ಸಂದರ್ಭದಲ್ಲಿ ಪುರೋಹಿತರ ಮೂಲಕ ಪೂಜಾ ಕಾರ್ಯಗಳು ನಡೆದು ಶಾರದಾ ಮಾತೆಯ ಮೂರ್ತಿ ಪೀಠಾರ್ಪಣೆ ನಡೆಯಿತು.

ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಜಯಾನಂದ ಗೌಡ, ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್, ಆಡಳಿತಾಧಿಕಾರಿ ಪ್ರಸಾದ್, ಶಿಕ್ಷಣ ಸಂಸ್ಥೆಯ ನಿರ್ದೇಶಕರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರು, ಪದಾಧಿಕಾರಿಗಳು, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರು ಲಕ್ಷ್ಮೀ ನಾರಾಯಣ್ ಕೆ., ಕಾಲೇಜಿನ ಉಪನ್ಯಾಸಕ ವೃಂದ, ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!