37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ವಿದ್ಯಾರ್ಥಿ ದೆಸೆಯಿಂದಲೇ ಸಂಸ್ಕಾರ, ಸಂಸ್ಕೃತಿ ಮತ್ತು ಸೇವಾ ಮನೋಭಾವಗಳನ್ನು ರೂಢಿಸಿಕೊಳ್ಳುವುದರಿಂದ ಉನ್ನತ ವ್ಯಕ್ತಿತ್ವವನ್ನು ಗಳಿಸಿಕೊಳ್ಳಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ ಹೇಳಿದರು.

ಅವರು ಶ್ರೀರಾಮ ಶಾಲೆ, ಸುಲ್ಕೇರಿ ಇಲ್ಲಿ ನಡೆಯಲಿರುವ ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತ, ನಮ್ಮ ಸಮಾಜ ಮತ್ತು ಪರಿಸರದ ಜನಜೀವನವನ್ನು ಅರಿತುಕೊಳ್ಳಬೇಕು. ದೇಶಕ್ಕಾಗಿ ತುಡಿಯುವ ಮನಸ್ಸು ಜಾಗೃತಗೊಳ್ಳಬೇಕು. ಎನ್ ಎಸ್ ಎಸ್ ನಂತಹ ಕಾರ್ಯ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಮಾನಸಿಕ ಮತ್ತು ಬೌದ್ಧಿಕ ಶಿಕ್ಷಣವನ್ನು ನೀಡುವುದರೊಂದಿಗೆ ಜೀವನಕ್ಕೆ ದಾರಿದೀಪವಾಗಿದೆ ಎಂದರು.
ಸುಲ್ಕೇರಿ ಶ್ರೀರಾಮ ಶಾಲೆಯ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಅಧ್ಯಕ್ಷ ರಾಜು ಪೂಜಾರಿ, ಕಾರ್ಯದರ್ಶಿ ಶಶಿಧರ ಶೆಟ್ಟಿ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ವಿದ್ಯಾ ಗೋರೆ, ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಬೊಳ್ಳಿಮಾರು, ಸುಲ್ಕೇರಿ ಗ್ರಾಮ ಪಂಚಾಯತ್ ಸದಸ್ಯ ನಾರಾಯಣ ಪೂಜಾರಿ, ಅಳದಂಗಡಿ ಪ್ರಾ. ಕೃ.ಪ.ಸ ಸಂಘದ ನಿರ್ದೇಶಕ ಸದಾನಂದ ಗೌಡ, ಸುಲ್ಕೇರಿ ಶ್ರೀ ರಾಮ ಶಾಲೆಯ ಮುಖ್ಯೋಪಾಧ್ಯಾಯ ಪ್ರಮೋದ್, ಎನ್ಎಸ್ಎಸ್ ಸಹಕಾರ್ಯಕ್ರಮಾಧಿಕಾರಿ ಶ್ರಾವ್ಯ, ಘಟಕ ನಾಯಕರು ತೀರ್ಥೇಶ್, ಸುಶ್ಮಿತಾ ಉಪಸ್ಥಿತರಿದ್ದರು.


ವಾಣಿ ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಧನ್ಯವಾದವಿತ್ತರು. ಉಪನ್ಯಾಸಕಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya
error: Content is protected !!