37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

ವಂಶಪಾರಂಪರ್ಯ ಆಯುರ್ವೇದ ಪಂಡಿತ, ನಾಡಿ ತಜ್ಞ, ‘ ಕರ್ನಾಟಕ ವೈದ್ಯರತ್ನ’ ಪ್ರಶಸ್ತಿ ಪುರಸ್ಕೃತ ಡಾ| ಸಲೀಂ ಗರ್ಡಾಡಿ ಅವರಿಗೆ ‘ ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ‘ ಲಭಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿಕಾರಿಪುರ ತಾಲೂಕು ಪಂಚಾಯತ್, ಗೊದ್ದನಕೊಪ್ಪ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ‘ಜಾನಪದ ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.


ಮೂಡುಬಿದಿರೆ ಸಮೀಪದ ಗರ್ಡಾಡಿಯವರಾಗಿದ್ದು ಮೂಡುಬಿದಿರೆಯಲ್ಲಿ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಹೊಂದಿರುವ ವೈದ್ಯ ಎಂ.ಕೆ.ಗರ್ಡಾಡಿ ಅವರ ಪುತ್ರರಾಗಿರುವ ಸಲೀಂ ಗರ್ಡಾಡಿ ಅವರು ಪ್ರಸ್ತುತ ಚಿಕ್ಕಮಗಳೂರಿನಲ್ಲಿ ಅಮೃತ ಸಂಜೀವಿನಿ ಆಯುರ್ವೇದಿಕ್ ಸಂಸ್ಥೆಯನ್ನು ಮುಂದುವರಿಸುತ್ತಿದ್ದಾರೆ.


ವಂಶಪಾರಂಪರ್ಯ ಆಯುರ್ವೇದ ಕ್ಷೇತ್ರದಲ್ಲಿ ಎಲೆಮರೆಕಾಯಿಯಂತೆ ಗಣನೀಯ ಸೇವೆ ಸಲ್ಲಿಸಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

Related posts

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 57ನೇ ಸಿನಿಮಾ ಬಹು ನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದಲ್ಲಿ ಪುತ್ತೂರಿನ ಬೆಡಗಿ ರಚನಾ ರೈ ನಾಯಕಿಯಾಗಿ ಅಭಿನಯ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!