25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿಯ ದಿನಾಚರಣೆಯನ್ನು ಅ.2 ರಂದು ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ್ ಪಿ. ಅವರು ಮಹಾತ್ಮ ಗಾಂಧೀಜಿಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಗಾಂಧೀಜಿಯವರ ತತ್ವ ಸಿದ್ಧಾಂತಗಳು ಮತ್ತು ಅಹಿಂಸೆ ಹಾಗೂ ಸತ್ಯದ ಮಾರ್ಗಗಳನ್ನು ಇಡೀ ದೇಶಕ್ಕೆ ಪಸರಿಸಿದ ಒಬ್ಬ ಮಹಾನ್ ವ್ಯಕ್ತಿ ಎಂದು ಅಭಿಪ್ರಾಯಪಟ್ಟರು. ಹಾಗೆಯೇ ಈ ದಿನವನ್ನು ಅಂತರಾಷ್ಟ್ರೀಯ ಅಹಿಂಸ ದಿನ ಎಂದು ವಿಶ್ವ ಮಟ್ಟದಲ್ಲಿ ಆಚರಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ನ ಯೋಜನಾಧಿಕಾರಿಯಾದ ಡಾ. ಮಹೇಶ್ ಕುಮಾರ್ ಶೆಟ್ಟಿ .ಹೆಚ್ ಮತ್ತು ರೋವರ್ ಸ್ಕೌಟ್ ಲೀಡರ್ ಪ್ರಸಾದ್ ಕುಮಾರ್ ಅವರು ಹಾಗೂ ಎಲ್ಲಾ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಮತ್ತು ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಸಾದ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿಯ 156ನೇ ಜನ್ಮದಿನದ ಸವಿ ನೆನಪಿಗಾಗಿ ಬೆಳ್ತಂಗಡಿ ತಾಲೂಕಿನ ಅನುಗ್ರಹ ಚಾರಿಟೇಬಲ್ ಟ್ರಸ್ಟ್ ನಡೆಸಲ್ಪಡುವ ವೃದ್ಧಾಶ್ರಮಕ್ಕೆ ಭೇಟಿ ನೀಡಿ ವೃದ್ಧರ ಕುಶಲೋಪರಿ ವಿಚಾರಿಸಿ ಹಣ್ಣು ಹಂಪಲುಗಳನ್ನು ಮತ್ತು ದಿನನಿತ್ಯ ಬಳಸಲಾಗುವ ವಸ್ತುಗಳನ್ನು ನೀಡಿ ಅವರಿಗೆ ಮನರಂಜನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Related posts

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya
error: Content is protected !!