September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

ಬೆಳ್ತಂಗಡಿ: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಸದಸ್ಯರು ಅ.01 ರಂದು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿ ದೇವರ ಸೇವೆ ಮಾಡಿದರು.


ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಒಟ್ಟು 85 ಜನ ಯುವವಾಹಿನಿ ಸದಸ್ಯರು ಸ್ವಯಂ ಸೇವಕರಾಗಿ ಭಾಗವಹಿಸಿದರು. ಕ್ಷೇತ್ರದ ವತಿಯಿಂದ ಕೋಶಾಧಿಕಾರಿಗಳಾದ ಪದ್ಮರಾಜ್ ಆರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಘಟಕದ ಅಧ್ಯಕ್ಷರನ್ನು ಅನುಗ್ರಹ ಪತ್ರವನ್ನು ನೀಡಿ ಗೌರವಿಸಿದರು ಈ ಸಂದರ್ಭದಲ್ಲಿ ಘಟಕದಿಂದ ಅನ್ನದಾನಕ್ಕೆ ಸಹಾಯಧನವನ್ನು ಹಸ್ತಾಂತರಿಸಲಾಯಿತು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವನಾಯಕರಾದ ರಕ್ಷಿತ್ ಶಿವರಾಂ ರವರು ಇಡೀ ದಿನ ಘಟಕದೊಂದಿಗೆ ಸ್ವಯಂ ಸೇವೆಯಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೆ ಬೆಳ್ತಂಗಡಿಯಿಂದ ಕುದ್ರೋಳಿಗೆ ತೆರಳಲು ಬಸ್ಸಿನ ವ್ಯವಸ್ಥೆಯನ್ನೂ ಮಾಡಿದರು.
ಘಟಕದ ಸದಸ್ಯರು ಕ್ಷೇತ್ರದಲ್ಲಿ ಸೇವಕೌಂಟರ್, ಪ್ರಸಾದ ಪ್ಯಾಕಿಂಗ್, ಅನ್ನಪ್ರಸಾದ ವಿತರಣೆಯಲ್ಲಿ ಸಹಕರಿಸಿದರು.
ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಎಂಕೆ ಪ್ರಸಾದ್, ಸುಜಾತ ಅಣ್ಣಿ ಪೂಜಾರಿ, ಸದಾಶಿವ ಪೂಜಾರಿ ಊರ, ಮಹಿಳಾ ಸಂಚಾಲನ ಸಮಿತಿ ಪ್ರಧಾನ ಸಂಚಾಲಕಿ ಲೀಲಾವತಿ ಪನಕಜೆ, ಘಟಕದ ಉಪಾಧ್ಯಕ್ಷರಾದ ಸಂತೋಷ್ ಸಾಲಿಯಾನ್ ಅರಳಿ, ಕಾರ್ಯದರ್ಶಿ ಮಧುರ ರಾಘವ್, ಕೋಶಾಧಿಕಾರಿ ನಾಗೇಶ್ ಆದೆಲು, ಕಾರ್ಯಕ್ರಮ ಸಂಯೋಜಕರಾದ ರಾಘವೇಂದ್ರ ಮೇಲಂತಬೆಟ್ಟು, ಜಯಶ್ರೀ ಕಿಲ್ಲೂರು, ಶೈಲೇಶ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.

Related posts

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!