September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಪ್ರಯುಕ್ತ, ಈ ಇಬ್ಬರು ರಾಷ್ಟ್ರ ನಾಯಕರ ಭಾವಚಿತ್ರದ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಲಾಯಿತು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ‘ ಈ ದೇಶ ಅಹಿಂಸಾ ಸಿದ್ಧಾಂತದಲ್ಲಿ ಸ್ವಾತಂತ್ರ್ಯ ಗಳಿಸುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹಾಗೂ ಸ್ವಾತ್ರಂತ್ರ್ಯ ಬಂದ ಬಳಿಕ ಅದನ್ನು ಉಳಿಸುವ ಹಾಗೂ ಸಮರ್ಥವಾಗಿ ದೇಶವನ್ನು ಮುನ್ನಡೆಸುವ ಮಹಾ ನಾಯಕನಾಗಿ ಕೀರ್ತಿಶೇಷ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಮುಖ್ಯರಾಗುತ್ತಾರೆ ಎನ್ನುತ್ತಾ, ಕಾಯ ಅಳಿದರೂ, ಅವರು ಮಾಡಿದ ಕಾಯಕದಿಂದ ಎಂದೆಂದಿಗೂ ಗಾಂಧೀಜಿ ಹಾಗೂ ಶಾಸ್ತ್ರಿಯವರು ಅಜರಾಮರರು ಎಂದು ಅವರು ಹೇಳಿದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜು, ವಿದ್ಯಾ ಸಾಗರ ಕ್ಯಾಂಪಸ್ ನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಅರಮಲೆ ಬೆಟ್ಟ ಕ್ಯಾಂಪಸ್ ನ ಪ್ರಾಚಾರ್ಯರಾದ ಡಾ ಪ್ರಜ್ವಲ್ ಕಜೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಉಪಪ್ರಾಂಶುಪಾಲ ರೋಹಿತ್, ಆಡಳಿತ ಮಂಡಳಿಯ ಸಹನಾ ಜೈನ್,ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡರು.

Related posts

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!