September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಅವರು ಸಮಾಜಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅ.2 ರಂದು ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ಮೋಹನ್ ಕುಮಾರ್ ಅವರು ಶಿಕ್ಷಣದಿಂದ ಯಾರು ವಂಚಿತರಾಗಬಾರದೆಂದು ಹಲವಾರು ಸರಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಿದ್ದಾರೆ.ಇಂದಿನ ಯುವ ಸಮಾಜಕ್ಕೆ ನಮ್ಮ ಸಂಸ್ಕೃತಿ,ಆಚಾರ ವಿಚಾರದ ಬಗ್ಗೆ ತಿಳಿಯಪಡಿಸುವ ಉದ್ದೇಶದಿಂದ ಹಲವಾರು ವಿಶಿಷ್ಟ, ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿದ್ದಾರೆ. ಪ್ರವಾಹಕ್ಕೆ ಸಿಲುಕಿ ಕೊಳಂಬೆ ಕೊಚ್ಚಿಹೋಗಿದ್ದು ವಿಶೇಷ ಆಸಕ್ತಿ ವಹಿಸಿ, ಕೊಳಂಬೆಯನ್ನು ಮರುಸೃಷ್ಟಿಗೊಳಿಸಿದ್ದು ದೊಡ್ಡ ಸಾಧನೆಯಾಗಿದೆ.ಈ ಎಲ್ಲಾ ಕೆಲಸ ಕಾರ್ಯಗಳನ್ನು ಗುರುತಿಸಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಕಾರ್ಯದರ್ಶಿ ರಂಜಿತ್ ಪೂಜಾರಿ,ನಿರ್ದೇಶಕರಾದ ದಿನೇಶ್ ಪೂಜಾರಿ ಅಂತರ,ಜಗದೀಶ್ ಪೂಜಾರಿ ಬಳ್ಳಿದಡ್ಡ, ಸಂತೋಷ್ ಕುಮಾರ್ ಹಿಮರಡ್ಡ,ದಿನೇಶ್ ಪೂಜಾರಿ ನಿಟ್ಟಡ್ಕ, ಪ್ರವೀಣ್ ಡಿ ಕೋಟ್ಯಾನ್ ಹಾಗೂ ಸತ್ಯಸಾಯಿ, ಪ್ರಥಮ್,ಇತರರು ಉಪಸ್ಥಿತರಿದ್ದರು.

Related posts

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya

ನಿಡ್ಲೆ ಗ್ರಾ.ಪಂ. ನಿಂದ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ದಿಢೀರ್ ಭೇಟಿ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ವಶಕ್ಕೆ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya
error: Content is protected !!