September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

ಗುರುವಾಯನಕೆರೆ: ಗಾಂಧೀಜಿಯವರ ಸತ್ಯ, ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ಮುನ್ನಡೆಯಬೇಕೆಂದು ವಿದ್ವತ್ ಪಿ.ಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ.ಇ. ಮಂಡಗಳಲೆ ತಿಳಿಸಿದರು.

ಅವರು ವಿದ್ವತ್ ಪಿ.ಯು ಕಾಲೇಜಿನಲ್ಲಿಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರ ಜನ್ಮ ದಿನಾಚರಣೆಯ ಮಹತ್ವವನ್ನು ತಿಳಿಸುತ್ತಾ ಈ ಮಾತುಗಳನ್ನಾಡಿದರು.
ಕಾರ್ಯಕ್ರಮವು ಕಾಲೇಜಿನ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಸಂಸ್ಥೆಯ ಕಾರ್ಯದರ್ಶಿಯವರು, ಕಾಲೇಜಿನ ಶೈಕ್ಷಣಿಕ ನಿರ್ದೇಶಕರು, ಉಪನ್ಯಾಸಕ ವರ್ಗದವರು, ವಿದ್ಯಾರ್ಥಿ ಪ್ರತಿನಿಧಿಗಳು, ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಗಾಂಧೀಜಿಯವರಿಗೆ ಪ್ರಿಯವಾದ ವೈಷ್ಣವ ಜಯತೋ ಮತ್ತು ರಘುಪತಿ ರಾಘವ ರಾಜಾರಾಮ್ ಭಜನೆಯನ್ನು ವಿದ್ಯಾರ್ಥಿಗಳು ಹಾಡಿದರು. ನಂತರ ಎಲ್ಲಾ ವಿದ್ಯಾರ್ಥಿಗಳು ದೇಶಭಕ್ತಿಗೀತೆಯನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಯವರಾದ ಪ್ರಜ್ವಲ್ ರೈ, ಪ್ರಾಂಶುಪಾಲರಾದ ಹರೀಶ್.ಕೆ.ಆರ್, ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಹರೀಶ್ ಬಳಂಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಡಿ. 13-14 ಬಳಂಜ ಶಾಲೆಗೆ ಅಮೃತ ಸಂಭ್ರಮ, ವಿಶೇಷ ಕಾರ್ಯಕ್ರಮಗಳ ಆಯೋಜನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya
error: Content is protected !!