September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

ಉಜಿರೆ : ಕುಂಟಿನಿ‌ ನಿವಾಸಿ ನಿವೃತ್ತ ವಿದೇಶಿ ಉದ್ಯೋಗಿ ಕತಾರ್ ಮುಹಮ್ಮದ್ ಕುಂಞಿ (67ವ) ಅವರು ಅ.3 ರಂದು ಕುಂಟಿನಿ ಮಸ್ಜಿದ್ ನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರು ನಮಾಝ್ ಗಾಗಿ ಮಸ್ಜಿದ್ ಗೆ ತೆರಳಿದ್ದವರು ಅಲ್ಲಿಯ ಹಠಾತ್ತನೇ ಹೃದಯಾಘಾತವಾಗಿ ಕೊನೆಯುಸಿರೆಳೆದರು. ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ವೈದ್ಯರು ಸಾವನ್ನಪ್ಪಿರುವ ಬಗ್ಗೆ ಖಚಿತಪಡಿಸಿದರು.

ವಿದೇಶದ ಕತಾರ್ ಕ್ರೀಡಾ ಘಟಕವಾದ ಫಿಫಾ ಅಸೋಸಿಯೇಷನ್ ನಲ್ಲಿ ಸುದೀರ್ಘ 30 ವರ್ಷ ಸೇವೆ ಸಲ್ಲಿಸಿ ಕೆಲ ವರ್ಷಗಳ ಹಿಂದೆ ಊರಿಗೆ ಮರಳಿದ್ದರು. ಲಾಯಿಲ ಗ್ರಾ.ಪಂ ಮಾಜಿ ಸದಸ್ಯರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಸೇವೆಯಲ್ಲಿದ್ದರು. ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಇದರ ನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದ‌ ಅವರು ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಸಮಾಜ ಸೇವಕರಾಗಿದ್ದ ಅವರು ಕತಾರ್ ಮುಸ್ಲಿಂ ಅಸೋಸಿಯೇಷನ್ ಸಂಘಟನೆಯ ಹೆಸರಿನಲ್ಲಿ ಬೆಳ್ತಂಗಡಿ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆಯಾಗಿ ನೀಡುವಲ್ಲಿ ಪ್ರಮುಖ ಕಾರಣಕರ್ತರಾಗಿದ್ದರು.

ಮೃತರು ಪತ್ನಿ ಖತೀಜಮ್ಮ, ಏಳು ಪುತ್ರರು, ಓರ್ವೆ ಹೆಣ್ಣು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!