38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಚೆಂಡೆ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಕಾರ್ಯಕ್ರಮನ್ನು ಉದ್ಘಾಟಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಚೆಂಡೆ ತರಬೇತಿಯ ಮೂಲಕ ಮಹಿಳೆಯರು ಇನ್ನಷ್ಟು ಮುಂದೆ ಬರಲಿ ಎಂದು ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶೋಧರ ರವರು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಮೂಲಕ ನಡೆಯುವಂತಹ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತಾ ಚೆಂಡೆ ತರಬೇತಿಯು ವೃತ್ತಿಯೊಂದಿಗೆ ಸಂಸ್ಕಾರ ಸಂಸ್ಕೃತಿಯನ್ನು ನೀಡಲಿ ಎಂದರು.

ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಮತಿ ಪುಷ್ಪಾವತಿಯವರು ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಚೆಂಡೆ ತರಬೇತಿಯ ಮೂಲಕ ನಮ್ಮ ಊರಿನ ಮಹಿಳೆಯರು ಮುಂದೆ ಬರಲು ಉತ್ತಮ ವೇದಿಕೆಯಾಗಿದ್ದು ತರಬೇತಿಯಲ್ಲಿ ಎಲ್ಲರೂ ಉತ್ತಮ ರೀತಿಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು,.

ತರಬೇತಿ ಶಿಕ್ಷಕ ಉಮೇಶ್ ರವರಿಗೆ ತರಬೇತಿಯನ್ನು ನೆರವೇರಿಸಿ ಕೊಡುವಂತೆ ವೇದಿಕೆಯಲ್ಲಿರುವ ಗಣ್ಯರಿಂದ ಫಲತಾಂಬೂಲ ನೀಡಲಾಯಿತು. ಉಮೇಶ್ ರವರು ತರಬೇತಿಯ ಸಮಯ ಮತ್ತು ನಿಯಮ ಪಾಲನೆಯ ಬಗ್ಗೆ ಮಾಹಿತಿ ನೀಡಿದರು. ಸೇವಾಪ್ರತಿನಿಧಿ ಪ್ರೇಮ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಧಿಕಾರಿ ಮಧುರಾ ವಸoತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya
error: Content is protected !!