27.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅ.02 ರಂದು ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಸಭೆಯ ಅಧ್ಯಕ್ಷ ಸ್ಥಾನವನ್ನಲಂಕರಿಸಿದ್ದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ರಾಷ್ಟ್ರಪಿತ ಗಾಂಧೀಜಿಯವರ ಅಹಿಂಸೆಯ ಚೈತನ್ಯವು ನಮ್ಮನ್ನು ಶಾಂತಿಯುತ ಪ್ರಪಂಚದತ್ತ ಮುನ್ನಡೆಸಲಿ. ನಮ್ಮ ರಾಷ್ಟ್ರಪಿತರ ಬದುಕು, ಬೋಧನೆ, ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು. ಸಿಯೋನ್ ಆಶ್ರಮದಲ್ಲಿ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ಹಿರಿಯರನ್ನು ಗೌರವಿಸಿ, ನೆಮ್ಮದಿಯ ಬದುಕು ಕಲ್ಪಿಸಿಕೊಡುವುದರಿಂದ ಮಾನವ ಜನ್ಮ ಸಾರ್ಥಕವಾಗಿಸಬಹುದೆಂದರು ಹಾಗೂ ಸಿಯೋನ್ ಆಶ್ರಮದಲ್ಲಿ ಯಾವುದೇ ಜಾತಿ-ಮತ, ಬೇಧ-ಭಾವವಿಲ್ಲದೇ ಬೇರೆ ಬೇರೆ ಧರ್ಮದ ಮೂವರು ಹಿರಿಯ ನಾಗರಿಕರನ್ನು ಗುರುತಿಸಿ, ಪ್ರತಿ ವರ್ಷ ಸನ್ಮಾನಿಸಲಾಗುವುದೆಂದು ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಹಿರಿಯ ನಾಗರಿಕರಾದ ನಿಡ್ಲೆ ಗ್ರಾಮದ ಪಿಲಿಕಜೆ ಎಂಬಲ್ಲಿ ವಾಸವಾಗಿರುವ ಶ್ರೀಮತಿ ಚಿನ್ನಮ್ಮ, ಮಾಲಾಡಿ ಗ್ರಾಮದ ಮಾರ್ನಿಂಗ್ ಸ್ಟಾರ್ ಎಂಬಲ್ಲಿ ವಾಸವಾಗಿರುವ ಜೆರಾಲ್ಡ್ ಮೋರಸ್ ಹಾಗೂ ಕೊಲ್ಪೆದಬೈಲು ಎಂಬಲ್ಲಿ ವಾಸವಾಗಿರುವ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಇವರುಗಳನ್ನು ಪ್ರಮಾಣ ಪತ್ರ, ಫಲಪುಷ್ಪಗಳೊಂದಿಗೆ, ಪೇಟಾ ಶಾಲು ಹೊದಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದ ಸ್ವಾಮಿ, ರೋಸರಿ ಡಿವೋಟರ್ ಬೇಬಿ, ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಲೆಕ್ಕಾಧಿಕಾರಿ ಶ್ರೀಮತಿ ಸೌಮ್ಯ ಯು.ಪಿ. ಹಾಗೂ ಅಶ್ರಮನಿವಾಸಿಯಾದ ಅನಿಲ್ ಉಪಸ್ಥಿತರಿದ್ದರು.


ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು. ವೈದ್ಯಾಧಿಕಾರಿ ಡಾ.ಶಿವಾನಂದ ಸ್ವಾಮಿ ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ಆಶಾ ವಂದಿಸಿದರು.

Related posts

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya
error: Content is protected !!