September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಅ. 3 ರಂದು ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೋಟರಿ ಸಮುದಾಯ ದಳ ಕಲ್ಮಂಜ ಜಂಟಿಯಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಆರೋಗ್ಯ ಶಿಕ್ಷಣಾಧಿಕಾರಿಯಾದ ಅಮ್ಮಿ ಮೇಡಂ ಇವರು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ವಿಮುಕ್ತಿ ಸಂಸ್ಥೆಯ ಮೇಲ್ವಿಚಾರಕಿಯಾದ ಶ್ರೀಮತಿ ರೋಹಿನಿ ಇವರು ಪೌಷ್ಟಿಕ ಆಹಾರದ ಉಪಯೋಗಗಳು ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು ರವರು ಯಾವ ರೀತಿಯ ಪೌಷ್ಟಿಕ ಆಹಾರ ಸೇವಿಸಬಹುದು ಎಂಬುದರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉತ್ತಮ ಆಹಾರ ತಯಾರಿಸಿದ ತಾಯಂದಿರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ, ಬಾಲ‌ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸವಿತಾ, ವಿಮುಕ್ತಿ ಸಂಸ್ಥೆಯ ‌ಮೇಲ್ವಿಚಾರಕಿ ರೋಹಿಣಿ, ಬೆಳ್ತಂಗಡಿ ರೋಟರಿ ಕ್ಲಬ್ ನ‌ ಅಧ್ಯಕ್ಷ ಪ್ರಕಾಶ್ ಪ್ರಭು, ಕಲ್ಮಂಜ ರೋಟರಿ ಸಮುದಾಯ ದಳದ ಕೋಶಾಧಿಕಾರಿ ಡಿ ಜಯಂತ್ ರಾವ್ ಕಲ್ಮಂಜ, ಸದಸ್ಯರಾದ ರಾಘವ್ ಕಲ್ಮಂಜ, ಸತೀಶ್ ಭಟ್ ತಂಟ್ಯ, ಸುಂದರ ಆಚಾರ್ಯ, ಪಂಚಾಯತ್ ಸದಸ್ಯರಾದ ಶ್ರೀಮತಿ ಶೋಭಾ, ಎಸ್.ಡಿ.ಎಮ್.ಸಿ ಅಧ್ಯಕ್ಷ ದಿನೇಶ್ ಗೌಡ , ಆಶಾ ಕಾರ್ಯಕರ್ತೆ, ಮಕ್ಕಳ ತಾಯಂದಿರು ಮತ್ತು ಸ್ತ್ರೀ ಶಕ್ತಿ ಸದಸ್ಯರು ಉಪಸ್ಥಿತರಿದ್ದರು.


ಸರೋಜಿನಿ ಸ್ವಾಗತಿಸಿ, ವಸಂತಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya
error: Content is protected !!