September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

ಅಖಿಲ ಭಾರತ ಬಿಲ್ಲವರ ಯೂನಿಯನ್ ರಿಜಿಸ್ಟರ್ಡ್ ಮಂಗಳೂರು ಇದರ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಉದ್ಘಾಟನೆಯನ್ನು ಅ.5 ರಂದು ನಿವೃತ್ತ ಎಸ್ ಪಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಯವರು ಮಂಗಳೂರಿನ ಓಷನ್ ಪರ್ಲ್ ಸಭಾಭವನದಲ್ಲಿ ಉದ್ಘಾಟಿಸಿ 2026 ಜನವರಿ 18ರಂದು ಮಂಗಳೂರು ನೆಹರು ಮೈದಾನದಲ್ಲಿ ನಡೆಯುವ ಜಾಗತಿಕ ಮಟ್ಟದ ಬಿಲ್ಲವ ಸಮಾಜದ ಮಹಿಳೆಯರು ಮತ್ತು ಮಹನೀಯರಿಗಾಗಿ ನಡೆಯುವ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ ಸುವರ್ಣ ರವರು ಸ್ವಾಗತಿಸಿ, ಪ್ರಸ್ತಾವಿಸುತ್ತಾ ಇದೊಂದು ಐತಿಹಾಸಿಕ ಸಮಾರಂಭ ಈ ಕ್ರೀಡಾಕೂಟದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದ ಕ್ರೀಡಾಸ್ಪರ್ಧಿಗಳು ಭಾಗವಹಿಸಬೇಕೆಂದು ತಿಳಿಸಿದರು.

ಕ್ರೀಡಾ ಪ್ರಧಾನ ಸಂಚಾಲಕರಾದ ಪುರುಷೋತ್ತಮ ಪೂಜಾರಿ ಕ್ರೀಡೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಪ್ರಧಾನ ಕಾರ್ಯದರ್ಶಿ ಜೀವನ್ ವರದಿಯನ್ನು ಯಾಚಿಸಿದರು. ವೇದಿಕೆಯಲ್ಲಿ ಕ್ರೀಡಾ ಸಂಚಾಲಕ ಸದಾನಂದ ಪೂಜಾರಿ, ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಸುಮಲತಾ ಎನ್ ಸುವರ್ಣ, ಉಪಾಧ್ಯಕ್ಷರುಗಳಾದ ಕೆಟಿ ಸುವರ್ಣ, ಲೋಕನಾಥ್ ಅಮೀನ್, ಕೋಶಾಧಿಕಾರಿ ಜಯಪ್ರಕಾಶ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಯೋಗೇಶ್ ಕುಮಾರ್ ಗೇರುಕಟ್ಟೆ, ಸಹಕರಿಸಿದರು.

ಸಮಾರಂಭದಲ್ಲಿ ಜಿಲ್ಲೆಯ ಬಿಲ್ಲವ ಸಮಾಜದ ಸಂಘಟನೆಗಳ ಪ್ರಮುಖರು, ದೇವಸ್ಥಾನಗಳ ಮುಖ್ಯಸ್ಥರು ಸಮಾಜದ ಬ್ಯಾಂಕುಗಳ ಅಧ್ಯಕ್ಷರುಗಳು, ಕ್ರೀಡಾಪಟುಗಳು, ರಾಜಕೀಯ, ಸಾಮಾಜಿಕ, ಮತ್ತು ಧಾರ್ಮಿಕ ಪ್ರಮುಖರು ಹಾಜರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya
error: Content is protected !!