23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆತಾಲೂಕು ಸುದ್ದಿವರದಿ

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

ಬೆಳ್ತಂಗಡಿ; ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಎಂ.ಎ. ಗಫೂರ್ ಅವರು ಸೋಮವಾರ ಕುದ್ಮುಲ್ ರಂಗರಾವ್ ಮಿನಿ ಪುರಭವನದಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭ ದ.ಕ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಇದರ ಸಂಕ್ರೀಯ ಸಂಘಟಕ ಹಾಗೂ ದ.ಕ ವಕ್ಫ್ ಸಲಹಾ ಸಮಿತಿ ಮಾಜಿ ಸದಸ್ಯ ಯು.ಕೆ ಮುಹಮ್ಮದ್ ಹನೀಫ್ ಅವರು ನೂತ‌ನ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂ ಗುಚ್ಛ ನೀಡಿ ಶುಭ ಕೋರಿದರು.ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಪದಗ್ರಹಣ ಸಮಾರಂಭದಲ್ಲಿ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಶಾಸಕ ಜೆ.ಆ‌ರ್. ಲೋಬೋ, ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಪದ್ಮರಾಜ್, ಚೇತನ್ ಬೆಂಗ್ರೆ, ಶಾಲೆಟ್ ಪಿಂಟೋ, ಲಾವಣ್ಯ ಬಳ್ಳಾಲ್, ಪ್ರತಿಭಾ ಕುಳಾಯಿ, ಟಿ.ಎಂ. ಶಹೀದ್, ವಿಶ್ವಾಸ್‌ಕುಮಾ‌ರ್ ದಾಸ್, ಅಶೋಕ್ ಕೊಡವೂರು, ಮಂಜುನಾಥ್, ಪ್ರಸಾದ್ ಕಾಂಚನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!