September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

ಉಜಿರೆ : ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಪ್ರಯುಕ್ತ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ (POSH) ವತಿಯಿಂದ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಒಂದು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಎಸ್ ಡಿ ಎಮ್ ಹಾಸ್ಪಿಟಲ್ ಉಜಿರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಶ್ರೀಮತಿ ಪ್ರಿಯಾಂಕಾ ಜಯದೇವ್ ಅವರು ಈ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ಮಹಿಳೆಯರಿಗೆ ಸಾಮಾನ್ಯವಾಗಿ ಕಾಡುವಂತಹ ಆರೋಗ್ಯ ಸಮಸ್ಯೆಗಳು ಮತ್ತು ಅದನ್ನು ತಡೆಗಟ್ಟುವ ಬಗ್ಗೆ ಮಾಹಿತಿಯನ್ನು ನೀಡಿದರು. ಕ್ಯಾನ್ಸರ್ ರೋಗದ ಲಕ್ಷಣಗಳು, ಮುಂಜಾಗ್ರತಾ ಕ್ರಮಗಳು ಮತ್ತು ಲಸಿಕೆಗಳ ಬಗ್ಗೆ ತಿಳಿಸಿದರು . ಉತ್ತಮ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರ ಪದ್ದತಿಯನ್ನು ಅನುಸರಿಸುವಂತೆ ಕರೆ ನೀಡಿದರು.

ವೇದಿಕೆಯಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ (POSH) ಮುಖ್ಯಸ್ಥೆಯಾದ ಮೇರಿ ಸ್ಮಿತಾ ಉಪಸ್ಥಿತರಿದ್ದರು . ಉಪನ್ಯಾಸಕಿ ರೆನಿಟಾ‌ ಫೆರ್ನಾಂಡೀಸ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಮಹಿಳಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
error: Content is protected !!