22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತವರದಿ

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

ಚಾರ್ಮಾಡಿ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಸಿದ್ಧ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ.

ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದಿದೆ. ಅಪಘಾತದಲ್ಲಿ ಲಾರಿ ಭಾಗಶಃ ಹಾನಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾನೆ.

ಗಾಯಗೊಂಡ ಚಾಲಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಅಪಘಾತದ ಪರಿಣಾಮವಾಗಿ ಕೆಲಕಾಲ ಟ್ರಾಫಿಕ್ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರ ಸಹಕಾರದಿಂದ ವಾಹನ ತೆರವುಗೊಳಿಸಿ ಸಂಚಾರವನ್ನು ಸರಳಗೊಳಿಸಲಾಯಿತು.

Related posts

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!