September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ನಾರಾವಿ: ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು ರೂ. 9.5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮನೆಯವರು ಅ.2ರಂದು ಮನೆಗೆ ಬೀಗ ಹಾಕಿ ಹೋಗಿದ್ದು ಅ.6 ರಂದು ಬಂದು ನೋಡಿದಾಗ ಮನೆಯ ಬೀಗ ಒಡೆದಿದ್ದು ಕಳ್ಳತನವಾಗಿರುವುದು ಕಂಡು ಬಂದಿದೆ. ಮನೆಯೊಳಗೆ ಪ್ರವೇಶಿಸಿದ ಕಳ್ಳರು ಬೆಡ್ ರೂಮಿನ ಕಪಾಟಿನ ಬೀಗ ಒಡೆದು ಅದರೊಳಗೆ ಇಟ್ಟಿದ್ದ ಎರಡೆಳೆಯ ಚಿನ್ನದ ಕರಿಮಣಿ ಸರ ಮುತ್ತಿನ ಸರ, ಚಿನ್ನದ ಬ್ರಾಸ್ ಲೈಟ್, ಮಕ್ಕಳ ಎರಡು ಸರಗಳು, ಒಂದು ಉಂಗುರ, ಒಂದು ಬೆಂಡೋಲೆ, ಚಿನ್ನದ ಉಂಗುರಗಳು ಸೇರಿದಂತೆ ಸುಮಾರು 149 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದು ಅದರ ಮೌಲ್ಯ ಸುಮಾರು 9,50,000 ಎಂದು ಅಂದಾಜಿಸಲಾಗಿದೆ.

ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.6 ರಂದು ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya
error: Content is protected !!