32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ಜಂಬೂ ಸವಾರಿ (ಮೆರವಣಿಗೆ)ಯಲ್ಲಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ.

ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ ಪ್ರದರ್ಶಿಸಿತ್ತು. ಈ ಸ್ತಬ್ಧಚಿತ್ರದಲ್ಲಿ ದಕ್ಷಿಣ ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಯಕ್ಷಗಾನ, ಕಂಬಳ, ಹುಲಿವೇಷ ಮತ್ತು ಇತರ ಜನಪದ ಹಾಗೂ ಸಾಂಪ್ರದಾಯಿಕ ಕ್ರೀಡೆಗಳ ವರ್ಣರಂಜಿತ ಚಿತ್ರಣವಿತ್ತು.

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಸ್ತಬ್ಧಚಿತ್ರವನ್ನು ರಚಿಸಲಾಗಿತ್ತು. ಗ್ರಾಮೀಣ ಕೈಗಾರಿಕೆಗಳ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಹೆಗ್ಡೆ ಅವರು ಈ ಯೋಜನೆಗೆ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Related posts

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya
error: Content is protected !!