September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

ಬೆಳ್ತಂಗಡಿ: ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering Zagreb Indices and Posets of a Graph using Mixed Degree Conditions” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾನಿಲಯವು ಅ.6 ರಂದು ಪಿ.ಎಚ್.ಡಿ. ಪದವಿ ಪ್ರದಾನ ಮಾಡಿದೆ.

ಈ ಸಂಶೋಧನಾ ಕಾರ್ಯಕ್ಕೆ ಡಾ. ಸಾಯಿನಾಥ್ ಉಡುಪ ಎನ್.ವಿ. ಹಾಗೂ ಡಾ. ಪೃಥ್ವಿರಾಜ್ ಎಂ. ಇವರು ಮಾರ್ಗದರ್ಶನ ನೀಡಿದ್ದರು.

ಇವರು ಪಿಲ್ಯ ಗ್ರಾಮ, ಬರಾಯದ ಲಕ್ಷ್ಮಣ ಪೂಜಾರಿ ಮತ್ತು ಲೀಲಾವತಿ ದಂಪತಿಯ ಪುತ್ರಿಯಾಗಿದ್ದು, ಅಳದಂಗಡಿಯ ಸಿವಿಲ್ ಇಂಜಿನಿಯರ್ ಪ್ರಸಾದ್ ಪೂಜಾರಿ ಇವರ ಪತ್ನಿಯಾಗಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಸೂಳಬೆಟ್ಟು ಮತ್ತು ಬಡಗಕಾರಂದೂರು ಶಾಲೆಗಳಲ್ಲಿ ಮುಗಿಸಿರುವ ಇವರು, ಎಸ್.ಡಿ.ಎಮ್ ಕಾಲೇಜು, ಉಜಿರೆಯಲ್ಲಿ ಬಿಎಸ್ಸಿ ಹಾಗೂ ಸಂತ ಫಿಲೋಮಿನಾ ಕಾಲೇಜು, ಪುತ್ತೂರು ಇಲ್ಲಿ ಎಂಎಸ್ಸಿ ಗಣಿತಶಾಸ್ತ್ರ ಪದವಿ ಪಡೆದಿದ್ದಾರೆ.

ಇವರು 2018ರಲ್ಲಿ ಕೆ -ಸೆಟ್ (K-SET) ಹಾಗು 2021ರಲ್ಲಿ ನಡೆದ ಕರ್ನಾಟಕ ಸರ್ಕಾರದ ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರದಲ್ಲಿ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!