ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಂಡ ಎರಡು ವಿದ್ಯಾರ್ಥಿನಿಲಯದ ಉದ್ಘಾಟನೆ ಸಮಾರಂಭ ಅ.11 ರಂದು ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಹಾಗೂ ಮಂಡತ್ಯಾರಿನ ಹಾಸ್ಟೆಲ್‌ಗಳು ಲೋಕರ್ಪಾಣೆಗೆ ಸಿದ್ಧಗೊಂಡಿದೆ. ಜಿಲ್ಲಾ ಉಸ್ತುವರಿ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ ವಿದ್ಯಾರ್ಥಿನಿಲಯ ಪುಂಜಾಲಕಟ್ಟೆ ಹಾಗೂ ಮಡಂತ್ಯಾರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಸಬರಬೈಲಿನಲ್ಲಿ ತಲಾ ಎರಡು ಕಟ್ಟಡಗಳು 3.5ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಶಾಸಕ ಹರೀಶ್ ಪೂಂಜರ ಸತತ ಪ್ರಯತ್ನದಿಂದ ಮಲೆನಾಡು ಅಭಿವೃದ್ಧಿ ನಿಗಮದಿಂದ 25 ಲಕ್ಷ ರೂ.ಅನುದಾನ ಓದಗಿಸಿದ್ದಾರೆ. ಸುಸಜ್ಜಿತ ಕಟ್ಟಡವನ್ನು ಒಳಗೊಂಡು ವಿದ್ಯಾರ್ಥಿನಿಲಯ ವಿಶಾಲವಾಗಿದೆ. ಇದರ ನಡುವೆ ಎರಡು ಕನಕದಾಸ ವಿದ್ಯಾರ್ಥಿನಿಲಯ ರೂ. 10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಇದಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಅಂದೇ ನಡೆಯಲಿದೆ. ತಲಾ ಒಂದು ವಿದ್ಯಾರ್ಥಿ ನಿಲಯವು 5 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಳ್ಳಲಿದೆ. ಬೆಳ್ತಂಗಡಿ ಪಟ್ಟಣದಲ್ಲಿ ಹಾಗೂ ಉಜಿರೆಯಲ್ಲಿ ಈ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದೆ.

Related posts

ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya
error: Content is protected !!