24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

ಬೆಳ್ತಂಗಡಿ : ಬೆಳ್ತಂಗಡಿ ತಹಶೀಲ್ದಾರ್ ನೀಡಿದ ಮಧ್ಯಂತರ ಬಾಂಡ್ ಕುರಿತ ನೋಟೀಸ್ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಜಿರೆ ನಿವಾಸಿ ತಿಮರೋಡಿ ಮಹೇಶ್ ಶೆಟ್ಟಿ ಮೇಲೆ ಹಲವು ಪ್ರಕರಣ ಇರುವ ಕಾರಣದಿಂದ ಬೆಳ್ತಂಗಡಿ ದಂಡಾಧಿಕಾರಿ (ತಹಶೀಲ್ದಾರ್)ಗೆ ಬೆಳ್ತಂಗಡಿ ಠಾಣಾಧಿಕಾರಿಗಳು 2025 ಮೇ.18ರಂದು ಬೆಳ್ತಂಗಡಿ ಆಡಳಿತ ಸೌಧದ ಕಚೇರಿಯಲ್ಲಿ ಭದ್ರತಾ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಕರೆಸಿ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾದಂತೆ 50 ಸಾವಿರ ರೂಪಾಯಿ ಮಧ್ಯಂತರ ಬಾಂಡ್ ಮಾಡಿಸಿ ಮುಚ್ಚಳಿಕೆ ಪತ್ರ ಬರೆಸಿ ಎಚ್ಚರಿಕೆ ನೀಡವ ಬಗ್ಗೆ ನೋಟೀಸ್ ನೀಡಿದ್ದರು.

ಮಧ್ಯಂತರ ಬಾಂಡ್ ಬಗ್ಗೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು,ದಂಡಾಧಿಕಾರಿ ಮತ್ತು ಠಾಣಾಧಿಕಾರಿ ವಿರುದ್ಧ ನೋಟಿಸ್‌ ಪ್ರಶ್ನಿಸಿ 2025 ಜೂ.20ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಅ. 8 ರಂದು ಅಜಿ೯ಯನ್ನು ವಜಾಗೊಳಿಸಿದೆ.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya
error: Content is protected !!