ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಮತ್ತು ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಮುಂಡಾಜೆ ಬೆಳ್ತಂಗಡಿ ತಾಲೂಕು, ದ.ಕ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಅ.10ರಿಂದ 11ರವರೆಗೆ ಮುಂಡಾಜೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅ.10ರಂದು ಸಂಜೆ 4 ಗಂಟೆಗೆ ಕರ್ನಾಟಕ ಸರಕಾರದ ಸಭಾಧ್ಯಕ್ಷ ಯು.ಟಿ. ಖಾದರ್ ಪರಿದ್ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಸಚಿವ ಮಧು ಎಸ್. ಬಂಗಾರಪ್ಪ ಗೌರವ ಉಪಸ್ಥಿತರಿರುವರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಅನೇಕ ಗಣ್ಯ ಅತಿಥಿಗಳು ಭಾಗವಹಿಸಲಿರುವರು, 8 ಜಿಲ್ಲೆಗಳಿಂದ ಒಟ್ಟು 32 ತಂಡಗಳು 600 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಪಂದ್ಯಾಟ ಸಂಜೆ 6 ಗಂಟೆಗೆ ಹೊನಲು ಬೆಳಕಿನಲ್ಲಿ ಪ್ರಾರಂಭವಾಗಲಿದೆ ಇದರೊಂದಿಗೆ ತಾಲೂಕಿನ ಹಾಗೂ ಜಿಲ್ಲೆಯ 150 ಮಂದಿ ಕ್ರೀಡಾ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮುಂಡಾಜೆಯ ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ ಎಂ.ಎಸ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಧರ್ಮಸ್ಥಳ: ಹದೆಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ಮತದಾನ ಬಹಿಷ್ಕಾರದ ಎಚ್ಚರಿಕೆ

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ಬಂಗಾಡಿ ಸ. ಉ. ಪ್ರಾ. ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya
error: Content is protected !!