26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

ಬೆಳ್ತಂಗಡಿ: ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರ ಅವರು ಇಂದಿರಾ ಕ್ಯಾಂಟೀನ್ ಬೆಳ್ತಂಗಡಿಗೆ ತರಬೇಕೆಂದು ಬಹಳ ಪ್ರಯತ್ನ ಪಟ್ಟಿದ್ದರು. ಆದರೇ ಜಾಗದ ಸಮಸ್ಯೆಯಿಂದ ಈಡೇರಿಸಲು ಸಾಧ್ಯವಾಗಿಲ್ಲ‌.ನಂತರ ಬದಲಾದ ಸರಕಾರದಿಂದ ಅವರ ಕನಸು ಈಡೇರಿರಲಿಲ್ಲ. ಇದೀಗ ಅಂಬೇಡ್ಕರ್ ಭವನದ ಬಳಿಕ ಜಾಗ ಗುರುತಿಸಲ್ಪಟ್ಟು ಕ್ಯಾಂಟೀನ್ ನಿರ್ಮಾಣದ ಕಾಮಗಾರಿ ಪೂರ್ಣಗೊಂಡಿದೆ. ಅ 11ರಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ವಿವಿಧ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಕ್ಯಾಂಟೀನ್ ಉದ್ಘಾಟಿಸಲಿದ್ದಾರೆ. ಈ ಮೂಲಕ ಬಂಗೇರರ ಕನಸು ಈಡೇರಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿದರು

ಅವರು ಅ.9ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಸರಕಾರ ತಾಲೂಕು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಬೆಳ್ತಂಗಡಿಯ ನಗರ ಹಾಗೂ ಗ್ರಾಮೀಣ ಪ್ರದೇಶದ ಕಾಮಗಾರಿಗಳಿಗೆ ಸುಮಾರು ರೂ. 2.00 ಕೋಟಿ ಮಂಜೂರುಗೊಳಿಸಿದ್ದಾರೆ. ಇದರ ಶಿಲಾನ್ಯಾಸವು ನಡೆಯಲಿದೆ ಎಂದರು.

ಡಿ‌.ದೇವರಾಜ್ ಅರಸು ಹಿಂದುಳಿದ ವರ್ಗಗಳ ಯೋಜನೆಯಿಂದ ನಿರ್ಮಾಣಗೊಂಡ ಪುಂಜಾಲಕಟ್ಟೆ, ಸಬರಬೈಲು, ಕಾಶಿಬೆಟ್ಟು ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆಯನ್ನು ಸಚಿವರು ಮಾಡಲಿದ್ದಾರೆ ಎಂದರು.

ಸುಮಾರು 125 ರಿಂದ 150 ಜನರಿಗೆ ಮಂಜೂರುಗೊಂಡ 94 ಸಿ ಹಕ್ಕುಪತ್ರವನ್ನು ಸಚಿವರು ವಿತರಿಸಲಿದ್ದಾರೆ. ಜೊತೆಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಕಾಂಗ್ರೇಸ್ ಹಿರಿಯ ನಾಯಕರಾದ ಕೆ.ಹರೀಶ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಕೂಡ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೇಸ್ ನಗರ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ,ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅದ್ಯಕ್ಷ ಪದ್ಮನಾಭ ಸಾಲಿಯಾನ್, ಜಿಲ್ಲಾ ಕೆ ಡಿ ಪಿ ಸದಸ್ಯರಾದ ಸಂತೋಷ್ ಕುಮಾರ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸದಸ್ಯರು ಜಗದೀಶ್ ಡಿ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷೆ ಶ್ರೀಮತಿ ಶೋಭಾ ನಾರಾಯಣ ಗೌಡ,
ಯುವ ಕಾಂಗ್ರೆಸ್ ಬೆಳ್ತಂಗಡಿ ಉಪಾಧ್ಯಕ್ಷ ರಾಘವೇಂದ್ರ ಮೆಲಂತಬೆಟ್ಟು ಉಪಸ್ಥಿತರಿದ್ದರು.

Related posts

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಕಲ್ಮಂಜ: ಶ್ರೀಲಕ್ಷ್ಮಿ ರಾಮಚಂದ್ರ ಹೆಗಡೆ ನಿಧನ

Suddi Udaya
error: Content is protected !!